ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶ ಶವವಾಗಿ ಪತ್ತೆ

ಒಡಿಶಾದ ವಿಶೇಷ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶ ಸುಭಾಷ್ ಕುಮಾರ್ ಬಿಹಾರಿ ಅವರು ಕಟಕ್‌ನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಶುಕ್ರವಾರ ಶವವಾಗಿ ಪತ್ತೆಯಾಗಿದ್ದಾರೆ.

ಪೊಲೀಸರ ಪ್ರಕಾರ, ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಾಥಮಿಕ ವರದಿಗಳ ಪ್ರಕಾರ ಇದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಟಕ್‌ ಎಸಿಪಿ ತಪಸ್ ಚಂದ್ರ ಪ್ರಧಾನ್, “ಲೈಂಗಿಕ ಅಪರಾಧಗಳಿಂದ ಮಕ್ಕಳ ವಿಶೇಷ ರಕ್ಷಣೆ ಕಾಯಿದೆ (ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶರಾದ ಸುಭಾಷ್ ಕುಮಾರ್ ಬಿಹಾರಿ ಅವರು ಕಟಕ್ ನಗರದ ತಮ್ಮ ಅಧಿಕೃತ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆಯಿಂದ ಮೃತಪಟ್ಟಂತೆ ತೋರುತ್ತಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.” ಎಂದು ಹೇಳಿದ್ದಾರೆ.

ಬಿಹಾರಿ ಎರಡು ದಿನಗಳ ಕಾಲ ರಜೆಯಲ್ಲಿದ್ದರು ಮತ್ತು ಶುಕ್ರವಾರ ಮತ್ತೆ ಸೇವೆಗೆ ಹಾಜರಾಗಬೇಕಿತ್ತು. ಆದರೆ, ಶುಕ್ರವಾರ ರಜೆ ವಿಸ್ತರಿಸಲು ಅರ್ಜಿ ಸಲ್ಲಿಸಿದ್ದರು. ನ್ಯಾಯಾಧೀಶರ ಪತ್ನಿ ಮತ್ತು ಮಗಳು ಮನೆಯಲ್ಲಿ ಇಲ್ಲದಿದ್ದಾಗ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಅವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

 
 
 
 
 
 
 
 
 

Leave a Reply