ಬಡಗುತಿಟ್ಟಿನ ಪ್ರಸಿದ್ಧ ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ

ಬಡಗುತಿಟ್ಟಿನ ಯಕ್ಷಗಾನ ಪ್ರಸಿದ್ಧ ಭಾಗವತ  ಸುಬ್ರಹ್ಮಣ್ಯ ಧಾರೇಶ್ವರ (67) ಅವರು ಎ.25 ರಂದು ಬೆಳಗ್ಗೆ 4.30 ಕ್ಕೆ ಬೆಂಗಳೂರಿನಲ್ಲಿ ತಮ್ಮ ಪುತ್ರನ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿದ್ದ ಇವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಇವರು ಪೆರ್ಡೂರು ಮೇಳದಲ್ಲಿ 28 ವರ್ಷ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದರು. ಬದುಕಿನುದ್ದಕ್ಕೂ ತಮ್ಮ ಸ್ವರದ ಮೂಲಕ ಕಲಾಭಿಮಾನಿಗಳ ಮನದಲ್ಲಿ ನೆಲೆಸಿದ್ದ ಭಾಗವತರ ಅಗಲುವಿಕೆ ಅವರ ಅಭಿಮಾನಿಗಳಿಗೆ ತುಂಬಲಾರದ ನಷ್ಟ.

 
 
 
 
 
 
 
 
 
 
 

Leave a Reply