ಕೀರ್ತಿಶೇಷ ಡಾll ವಿ.ಎಸ್. ಆಚಾರ್ಯ ನಿವಾಸಕ್ಕೆ ಸಚಿವ ಸುನೀಲ್ ಕುಮಾರ್ ಭೇಟಿ.

ನೂತನ ಸಚಿವರಾದ  ಶ್ರೀ ವಿ. ಸುನಿಲ್ ಕುಮಾರ್ ಅವರೊಂದಿಗೆ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಕೀರ್ತಿಶೇಷ ಡಾll ವಿ.ಎಸ್. ಆಚಾರ್ಯ ಅವರ ಮನೆಗೆ ವಿ. ಸುನೀಲ್ ಕುಮಾರ್ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಶನಿವಾರ ಭೇಟಿ ನೀಡಿ ಅವರ ಧರ್ಮಪತ್ನಿ ಶಾಂತಾ ವಿ. ಆಚಾರ್ಯ ಅವರ ಕ್ಷೇಮಾರೋಗ್ಯವನ್ನು ವಿಚಾರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಉಪಾಧ್ಯಕ್ಷರಾದ ಯಶ್ ಪಾಲ್ ಸುವರ್ಣ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ಉಡುಪಿ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಿರೀಶ್ ಅಂಚನ್, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ದಿನಕರ್ ಪೂಜಾರಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply