ರಾಜ್ಯದ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಕಡ್ಡಾಯ ಉದ್ಯೋಗ : ಸಚಿವ ವಿ ಸುನೀಲ್ ಕುಮಾರ್

ಉಡುಪಿ​: ಸರೋಜಿನಿ ಮಹಿಷಿ ವರದಿ​​ಯಂತೆ ರಾಜ್ಯದಲ್ಲಿನ ಐಟಿ ಬಿಟಿ ಸೇರಿದಂತೆ ಎಲ್ಲಾ​ ಖಾಸಗಿ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಕಡ್ಡಾಯವಾಗಿ ಉದ್ಯೋಗ ನೀಡುವ ಕುರಿತಂತೆ , ಕಾನೂನು ಚೌಕಟ್ಟಿನಲ್ಲಿ​ ಅವಕಾಶ ಕಲ್ಪಿಸಲಾಗುವುದು ಎಂದು ರಾಜ್ಯದ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಸಚಿವ ವಿ ಸುನೀಲ್​ ಕುಮಾರ್ ಹೇಳಿದರು.
ಅವರು ಇಂದು ಅಜ್ಜರಕಾಡು ಮಹಾತ್ಮಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕನ್ನಡ​ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.​ ನಿರುದ್ಯೋಗ ನಿವಾರಣೆ ಮತ್ತು ಕನ್ನಡ ಭಾಷಾಭಿಮಾನ ಹೆಚ್ಚಿಸಲು , ಕರ್ನಾಟಕದಲ್ಲಿ ಕನ್ನಡಿಗರಿಗೆ ಮೊದಲ​ ​ಪ್ರಾಶಸ್ತ್ಯ ವನ್ನು ನೀಡುವ ನಿಟ್ಟಿನಲ್ಲಿ, ಸರೋಜಿನಿ ಮಹಿಷಿ ವರದಿಯಲ್ಲಿ ಕೆಲ ಮಾರ್ಪಾಡುಗಳೊಂದಿಗೆ ಕಾನೂನಿನ​ ಚೌಕಟ್ಟಿನಲ್ಲಿ ಕನ್ನಡಿಗರಿಗೆ ಕಡ್ಡಾಯವಾಗಿ ಉದ್ಯೋಗ ದೊರಕಿಸಲು ಪ್ರಯತ್ನಿಸಲಾಗುವುದು ಎಂದರು.
ಯುವ ಜನತೆ ಕನ್ನಡ ಸಾಹಿತ್ಯವನ್ನು ಹೆಚ್ಚು ಹೆಚ್ಚು ಓದುವುದರೊಂದಿಗೆ , ನವ ಸಾಹಿತಿಗಳ ಸಂಖ್ಯೆ ಹೆಚ್ಚಿಸಲು​ ಬೇಕಾದ ಸೌಲಭ್ಯಗಳನ್ನು ಸರಕಾರದಿಂದ ನೀಡಲು ಸೂಕ್ತ ಯೋಜನೆಗಳನ್ನು ರೂಪಿಸ ಲಾಗುವುದು ಎಂದ ಅವರು ,​ ಕನ್ನಡ ಪುಸ್ತಕಗಳನ್ನು ಓದುವ ಪ್ರವೃತ್ತಿಯನ್ನು ರೂಢಿಸಿಕೊಳ್ಳು ವುದರೊಂದಿಗೆ ಇತರರಿಗೂ ಕನ್ನಡ ಓದುವ ಮತ್ತು​ ಭಾ಼ಷಾಭಿಮಾನದ ಗೀಳು ಮೂಡಿಸಬೇಕು ಎಂದರು.
ರಾಜ್ಯದ ಮನೆ ಮನೆಗಳಲ್ಲಿ ಕನ್ನಡದ ಬಳಕೆ ಆಗಬೇಕು, ಮಕ್ಕಳಿಗೆ ಕನ್ನಡ ಭಾವಗೀತೆಗಳನ್ನು ಕೇಳಿಸಬೇಕು​ ,ಕುಟುಂಬ ಸದಸ್ಯರೊಂದಿಗೆ ಕನ್ನಡದಲ್ಲಿ ಮಾತನಾಡಬೇಕು, ಕನ್ನಡ ಬಳಕೆಯ ಮಧ್ಯದಲ್ಲಿ ಅನ್ಯಭಾಷೆಯ ಪ್ರಯೋಗ​ ಸಲ್ಲದು ಎಂದು ಸಚಿವರು ಹೇಳಿದರು.​ 
ಜಿಲ್ಲೆಗಳಲ್ಲಿ ನೀಡುವ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಯಾವುದೇ ನಿರ್ದಿಷ್ಠ ಮಾನದಂಡಗಳು ಇಲ್ಲವಾಗಿದ್ದು,​ ಇದರಿಂದ ಗೊಂದಲಗಳಾಗುತ್ತಿದ್ದು, ಈ ಬಗ್ಗೆ ಸೂಕ್ತ ಏಕರೂಪದ ನಿಯಮಾವಳಿಗಳನ್ನು ಹೊರಡಿಸಿ,​ ​ಅದರ​ ಆಧಾರದಲ್ಲಿ ಮುಂದಿನ ವರ್ಷದಿಂದ ಜಿಲ್ಲೆಗಳಲ್ಲಿ ಪ್ರಶಸ್ತಿ ವಿತರಿಸಲಾಗುವುದು ಎಂದರು.
ಕನ್ನಡ ಮತ್ತು ಕರುನಾಡಿಗೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ಕರುನಾಡಿನ ಸಾಂಸ್ಕೃತಿಕ ಪರಂಪರೆಯನ್ನು​ ಉಳಿಸಿ ಬೆಳೆಸುವುದರೊಂದಿಗೆ ದೇಶ-ವಿದೇಶಗಳಲ್ಲಿಯೂ ಕನ್ನಡದ ಕಂಪು ಮೂಡಿಸುವಂತಾಗಬೇಕು. ಆ ನಿಟ್ಟಿನಲ್ಲ​ ನಾವು ದೇಶಭಿಮಾನ ಮತ್ತು ಬಾ಼ಷೆಯ ಸ್ವಾಭಿಮಾನಿ ಗಳಾಗುವುದು ಅನಿವಾರ್ಯತೆ ಇದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಜಿಲ್ಲೆಯ 30 ಸಾಧಕರಿಗೆ ಹಾಗೂ 3 ​ಸಂಘ ​ಸಂಸ್ಥೆಗಳಿಗೆ ಜಲ್ಲಾ​ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.​ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಉಡುಪಿ ಶಾಸಕ ಕೆ. ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಪ್ರಭಾರ​ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಡಾ. ನವೀನ್ ಭಟ್ ವೈ, ಅಪಾರ ಜಿಲ್ಲಾಧಿಕಾರ ಸದಾಶಿವ ಪ್ರಭು, ಜಿಲ್ಲಾ​ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ,ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ಇತರರು ಉಪಸ್ಥಿತರಿದ್ದರು.​ 

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸ್ವಾಗತಿಸಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ​ ನಿರ್ದೇಶಕ ಡಾ. ರೋಷನ್ ಕುಮಾರ್ ಶೆಟ್ಟಿ ವಂದಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿದರು.​​
 
 
 
 
 
 
 
 
 
 
 

Leave a Reply