ರಾಜ್ಯಾದ್ಯಂತ ಏಕಕಾಲದಲ್ಲಿ ಕೋಟಿ ಕಂಠ ಗಾಯನ.

ಆಕ್ಟೊಬರ್ 28 ರಂದು ರಾಜ್ಯ ಸೇರಿದಂತೆ ವಿಶ್ವದ ಇತರೆ ಭಾಗದಲ್ಲಿರುವ 1 ಕೋಟಿಗೂ ಅಧಿಕ ಕನ್ನಡಿಗರಿಂದ ಕನ್ನಡದ ಹಿರಿಮೆ ಸಾರುವ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ನಡೆಸಲು ಸಿದ್ದಾತೆ ನಡೆಸಲಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಹೆಳಿದರು.
ಅಕ್ಟೋಬರ್ 28 ರಂದು ಬೆಳಗ್ಗೆ 11 ಗಂಟೆಗೆ ಏಕಕಾಲದಲ್ಲಿ 10000 ಸ್ಥಳದಲ್ಲಿ ಗಾಯನ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮ ದಲ್ಲಿ ಭಾಗವಹಿಸಲು ಆಕ್ಟೊಬರ್ 20 ರ ಒಳಗೆ QR code ಮೂಲಕ ನೋಂದಣಿ ಮಾಡಿಕೊಳ್ಳುವಂತೆ ತಿಳಿಸಿದರು.
ರಾಜ್ಯದ 50 ಕಡೆ ಯೂನಿಕ್ ಕಾರ್ಯಕ್ರಮ ನಡೆಯಲಿದ್ದು , ಉಡುಪಿಯಲ್ಲಿ ಮಣಿಪಾಲದ  ಕೆ.ಎಂ.ಸಿ.ಯ 2500 ಮಂದಿ ವ್ಯದ್ಯರು ಮತ್ತು ಸಿಬ್ಬಂದಿ ಹಾಗೂ ಮಲ್ಪೆ ಸಮುದ್ರದಲ್ಲಿ ನಡೆಸುವಂತೆ ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ ಕನಿಷ್ಠ 3 ರಿಂದ 4 ಲಕ್ಷ ಜನ ಕಾರ್ಯಕ್ರಮ ದಲ್ಲಿ ಭಾಗವಹಿಸಲು ಸಿದ್ಧತೆ ಮಾಡಿಕೊಳ್ಳಬೇಕು, ಆಟೋ ಚಾಲಕರು, ಪೌರ ಕಾರ್ಮಿಕರು, ಗೇರು ಬೀಜ ಕಾರ್ಖಾನೆ ಸಿಬ್ಬಂದಿ, ಮೀನುಗಾರರು,ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಬೇಕು ಎಂದರು.

ಉಡುಪಿ ಶಾಸಕ ರಘುಪತಿ ಭಟ್, ಜಿಲ್ಲಾಧಿಕಾರಿ ಕೂರ್ಮಾರಾವ್, ಎಸ್ಪಿ ಹಾಕೆ ಅಕ್ಷಯ್ ಮಚ್ಚಿನ್ದ್ರ, ಜಿ.ಪಂ.
ಸಿ ಇ ಓ ಪ್ರಸನ್ನ, ಅಪರ ಜಿಲ್ಲಾಧಿಕಾರಿ ವೀಣಾ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply