ಮೂರು ಕೃಷಿ ಕಾಯ್ದೆಗಳಿಗೆ ಸುಪ್ರೀಂ ತಾತ್ಕಾಲಿಕ ತಡೆ

ಕೇಂದ್ರದ ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಸಮಿತಿಯೊಂದನ್ನು ರಚಿಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದ್ದು, ವಿವಾದಿತ ಕೃಷಿ ಕಾಯ್ದೆ ಜಾರಿಗೆ ತಾತ್ಕಾಲಿಕವಾಗಿ ತಡೆ ನೀಡಿ ಆದೇಶ ಹೊರಡಿಸಿದೆ.

ವಿವಾದಿತ ಕೃಷಿ ಮಸೂದೆ ಕುರಿತು ಸಲ್ಲಿಕೆಯಾಗಿರುವ ಅರ್ಜಿಗಳನ್ನು ವಿಚಾರಣಗೆ ಕೈಗೆತ್ತಿಕೊಂಡಿರುವ ನ್ಯಾಯಾಲಯ, ಯಾವುದೇ ಶಕ್ತಿಗೂ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಈಗಿರುವ ಸಮಸ್ಯೆಯನ್ನು ನಾವು ಇತ್ಯರ್ಥಪಡಿಸಲೇಬೇಕಾಗಿದೆ. ಮುಂದಿನ ಆದೇಶ ನೀಡುವವರೆಗೆ ಕೇಂದ್ರದ ಮೂರು ನೂತನ ಕೃಷಿ ಕಾಯ್ದೆಗೆ ತಾತ್ಕಾಲಿಕ ತಡೆ ನೀಡಲಾಗಿದೆ ಎಂದು ಮುಖ್ಯ ನ್ಯಾಯಾಮೂರ್ತಿಗಳು ಹೇಳಿದ್ದಾರೆ.

ನಾಲ್ವರು ಕೃಷಿ ತಜ್ಞರನ್ನೊಳಗೊಂಡ ಸಮಿತಿಯನ್ನು ರಚಿಸಲಾಗುವುದು. ಸಮಿತಿಯಲ್ಲಿ ಕಾಯ್ದೆ ಕುರಿತ ಸಾಧಕ ಹಾಗೂ ಬಾಧಕಗಳ ಕುರಿತು ಚರ್ಚೆ ನಡೆಸುತ್ತೇವೆ. ರೈತರು ಈ ಕುರಿತಾಗಿ ನಮ್ಮೊಂದಿಗೆ ಸಹಕಾರ ನೀಡಬೇಕು ಎಂದರು.

ರೈತ ಸಂಘಟನೆಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಜನವರಿ 26 ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ರಾಲಿಯನ್ನು ಕೈಬಿಡುವಂತೆ ಸೂಚಿಸಿದೆ.

 
 
 
 
 
 
 
 
 
 
 

Leave a Reply