ಸುರತ್ಕಲ್ ಟೋಲ್ ಗೇಟ್ ಚಲೋ ಪಾದಯಾತ್ರೆಗೆ ಸೊರಕೆ ಚಾಲನೆ

ಮುಲ್ಕಿ : ಸುರತ್ಕಲ್ ತಾತ್ಕಾಲಿಕ ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ಹಾಗೂ ಹೆಜಮಾಡಿ ಟೋಲ್‌ನಲ್ಲಿ ಸ್ಥಳೀಯರಿಗೆ ಟೋಲ್ ವಿನಾಯಿತಿ ನೀಡಬೇಕು ಎಂದು ಆಗ್ರಹಿಸಿ ಮಂಗಳವಾರ ಸುರತ್ಕಲ್ ಟೋಲ್ ಗೇಟ್ ಚಲೋ ಪಾದಯಾತ್ರೆಗೆ ಕಾಪು ತಾಲೂಕಿನ ಹೆಜಮಾಡಿ ಟೋಲ್ ಗೇಟ್ ಬಳಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಡೋಲು ಬಡಿಯುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಅವರು, ಟೋಲ್‌ಗೇಟಿನಲ್ಲಿ ಸಾರ್ವಜನಿಕರಿಂದ ಅನೈತಿಕವಾಗಿ ಸುಂಕ ವಸೂಲಿ ಮಾಡುತ್ತಿರುವುದರಿಂದ ನಿತ್ಯ ಸಂಚರಿಸುವ ಪ್ರಯಾಣಿಕರು ಬವಣೆ ಪಡುವಂತಾಗಿದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ, ಉಭಯ ಜಿಲ್ಲೆಗಳ ನಾಗರಿಕರು ಸ್ವಯಂ ಪ್ರೇರಿತರಾಗಿ ಭಾಗವಹಿಸಿದ್ದು, ಈ ಹೋರಾಟದ ಮೂಲಕ ಸುರತ್ಕಲ್ ಟೋಲ್ ತೆರವುಗೊಳಿಸದಿದ್ದಲ್ಲಿ, ಮುಂದಿನ ದಿನಗಳಲ್ಲಿ ಜೈಲ್‌ಭರೋ ಹೋರಾಟಕ್ಕೂ ಸಿದ್ಧರಿದ್ದೇವೆ ಎಂದು ಹೇಳಿದರು.

ಹೆಜಮಾಡಿ, ಮುಲ್ಕಿ, ಕೊಳ್ನಾಡು, ಹಳೆಯಂಗಡಿ, ಮುಕ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುರತ್ಕಲ್ ಎನ್‌ಐಟಿಕೆ ಟೋಲ್‌ಗೇಟ್‌ಗೆ ತಲುಪಲಿದೆ. ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕ ಮೊಯಿದಿನ್ ಬಾವ, ಹೋರಾಟ ಸಮಿತಿಯ ಮುನೀರ್ ಕಾಟಿಪಳ್ಳ, ಬಿಲ್ಲವ ಮಹಾಮಂಡಳದ ಅಧ್ಯಕ್ಷ ರಾಜಶೇಖರ್ ಕೋಟ್ಯಾನ್, ನ್ಯಾಯವಾದಿ ದಿನೇಶ್ ಹೆಗ್ಡೆ ಉಳೆಪಾಡಿ, ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ರಮೇಶ್ ಕೆ. ಕೋಟ್ಯಾನ್ ಮತ್ತಿತರರು ಭಾಗವಹಿಸಿದ್ದರು.

 
 
 
 
 
 
 
 
 
 
 

Leave a Reply