ವಿದ್ಯಾಭ್ಯಾಸ, ಉದ್ಯೋಗ ಮತ್ತು ಸಬಲೀಕರಣಕ್ಕೆ ಒತ್ತು ನೀಡಿರುವ ಸರ್ವ ಸ್ಪರ್ಶಿ ಸರ್ವ ವ್ಯಾಪಿ ಬಜೆಟ್: ಕುಯಿಲಾಡಿ ಸುರೇಶ್ ನಾಯಕ್

ರಾಜ್ಯದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಡಿಸಿರುವ ಈ ಬಾರಿಯ ಬಜೆಟ್ ವಿದ್ಯಾಭ್ಯಾಸ, ಉದ್ಯೋಗ ಮತ್ತು ಸಬಲೀಕರಣಕ್ಕೆ ಒತ್ತು ನೀಡಿರುವ ಸರ್ವ ಸ್ಪರ್ಶಿ ಸರ್ವ ವ್ಯಾಪಿ ಬಜೆಟ್ ಆಗಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಬಜೆಟ್ ನಲ್ಲಿ ಯಾವುದೇ ಹೆಚ್ಚುವರಿ ತೆರಿಗೆ ಭಾರ ಹೊರಿಸದೆ ಇದ್ದುದರಲ್ಲೇ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲಾಗಿದೆ.

ಆಡಳಿತ ಸುಧಾರಣೆಗೆ ಹೆಚ್ಚಿನ ವೆಚ್ಚ, ಕಾಶಿ ಯಾತ್ರೆಗೆ ಸಬ್ಸಿಡಿ, ಪವಿತ್ರ ಯಾತ್ರೆ ಯೋಜನೆ, ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಯೋಜನೆ, ನೀಟ್ ವಿದ್ಯಾರ್ಥಿಗಳಿಗೆ ಉಚಿತ ಕೋಚಿಂಗ್, ವೈದ್ಯಕೀಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಸಾಲ, ಕರ್ನಾಟಕ ಕಲಾ ಗ್ರಾಮ ಯೋಜನೆ, ನಮ್ಮ ಕ್ಲಿನಿಕ್ ಯೋಜನೆ, ಉಡುಪಿ ಮತ್ತು ದ.ಕ. ಜಿಲ್ಲೆಗೆ ತಲಾ ಒಂದು ಶ್ರೀ ನಾರಾಯಣ ಗುರು ವಸತಿ ಶಾಲೆ ಯೋಜನೆ, ಕಾರ್ಮಿಕ ಕ್ಷೇಮಾಭಿವೃದ್ಧಿ ಯೋಜನೆ, ನೀರಾವರಿಗೆ ಆದ್ಯತೆ, ಕುರಿ ಮತ್ತು ಮೇಕೆಗಳಿಗೆ ಪರಿಹಾರ ಧನ ನೀಡುವ ಅನುಗ್ರಹ ಯೋಜನೆ, ಗೋ ಸಂತತಿಯ ರಕ್ಷಣೆ ಮತ್ತು ಅಭಿವೃದ್ಧಿಗಾಗಿ ಪುಣ್ಯಕೋಟಿ ದತ್ತು ಯೋಜನೆ ಮುಂತಾದ ಅಭಿವೃದ್ಧಿ ಪರ ಯೋಜನೆಗಳೊಂದಿಗೆ ಜನ ಮಾನಸದಲ್ಲಿ ಭರವಸೆ ಮೂಡಿಸಿರುವ ಪ್ರಗತಿಪರ ಬಜೆಟ್ ಇದಾಗಿದೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply