ಎಸ್.ವಿ.ಎಸ್. ಶಾಲೆ ಇನ್ನಂಜೆಯಲ್ಲಿ ಪಿಪಿಸಿ ಎನ್.ಎಸ್.ಎಸ್. ನ ವಾರ್ಷಿಕ ವಿಶೇಷ ಶಿಬಿರ

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ ಪೂರ್ಣಪ್ರಜ್ಞ ಕಾಲೇಜು ಉಡುಪಿ
ಎನ್.ಎಸ್.ಎಸ್.ನ ವಾರ್ಷಿಕ ವಿಶೇಷ ಶಿಬಿರವನ್ನು ದಿನಾಂಕ 24.12.2022 ರಿಂದ 30.12.2022ರ ವರೆಗೆ ಎಸ್.ವಿ.ಎಸ್. ಹಿರಿಯ ಪ್ರಾಥಮಿಕ ಶಾಲೆ ಇನ್ನಂಜೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ದಿನಾಂಕ 24.12.2022 ರಂದು ಸ೦ಜೆ ಗಂಟೆ 3.30ಕ್ಕೆ ಶಿಬಿರದ ಉದ್ಘಾಟನೆಯನ್ನು ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ನೆರವೇರಿಸಲಿದ್ದಾರೆ ಹಾಗೂ ದಿನಾಂಕ 30.12.22 ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಮಾನ್ಯ ಸಚಿವರು ಸಮಾಜಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕರ್ನಾಟಕ ಸರಕಾರ ಇವರು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಘವೇಂದ್ರ ಎ. ಇವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
 
 
 
 
 
 
 
 
 
 
 

Leave a Reply