ತೆರೆ ಮರೆಯಲ್ಲಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ವಿಶೇಷ ತರಬೇತಿ

ತೆರೆ ಮರೆಯಲ್ಲಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ವಿಶೇಷ ತರಬೇತಿ ನೀಡುವುದೇ ಸರಕಾರದ ಖೇಲೋ ಇಂಡಿಯಾ,ಫಿಟ್ ಇಂಡಿಯಾ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಉಡುಪಿ ಡಯಟ್ ನ ಉಪ ಪ್ರಾಂಶುಪಾಲ ಅಶೋಕ್ ಕಾಮತ್ ತಿಳಿಸಿದ್ದಾರೆ.

ಅವರು ಉಡುಪಿ ಸಂತ ಸಿಸಿಲಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಉಡುಪಿ ವಲಯ ದೈ ಶಿ ಶಿಕ್ಷಕರಿಗೆ ನಡೆದ ಖೇಲೊ ಇಂಡಿಯಾ, ಫಿಟ್ ಇಂಡಿಯಾ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.ಪ್ರತೀ ಮಕ್ಕಳು ಬಾಲ್ಯದಲ್ಲಿ ಯಾವುದಾದರೂ ಒಂದು ಕ್ರೀಡೆಯಲ್ಲಿ ಆಸಕ್ತಿ ವಹಿಸುವಂತೆ ನೋಡಿಕೊಳ್ಳಬೇಕೆಂದು ಶಿಕ್ಷಕರಿಗೆ ಕಿವಿ ಮಾತು ಹೇಳಿದರು.

ಮುಖ್ಯ ಅತಿಥಿಯಾಗಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರವಿ ಕೆ ಭಾಗವಹಿಸಿದ್ದರು.ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಪ್ರೀತಿ ಕ್ರಾಸ್ತಾ,ವಲಯ ದೈ ಶಿ ಸಂಘದ ಅಧ್ಯಕ್ಷ ಡೊಮಿಯನ್ ನೊರೊನ್ನ,ಗ್ರೇಡ್ 1 ಸಂಘದ ಅಧ್ಯಕ್ಷ ಸತೀಶ್ ಸಾಲಿಯಾನ್, ಸಂಪನ್ಮೂಲ ವ್ಯಕ್ತಿಗಳಾದ ಅಜಾದ್ ಮಹಮ್ಮದ್, ಸುಧಾಕರ ಶೆಟ್ಟಿ, ನರೇಂದ್ರ ಕಾಮತ್ ಉಪಸ್ಥಿತರಿದ್ದರು.

 ಡಯಟ್ ಉಪನ್ಯಾಸಕ ವೆಂಕಟೇಶ್ ನಾಯಕ್ ಸ್ವಾಗತಿಸಿದರು. ತಾ| ದೈ ಶಿ ಅಧಿಕಾರಿ ವಿಶ್ವನಾಥ ಬಾಯರಿ ವಂದಿಸಿದರು. ಶಿಕ್ಷಕ ಸೋಮಶೇಖರ್ ನಿರೂಪಿಸಿದರು.

 
 
 
 
 
 
 
 
 
 
 

Leave a Reply