ಕಾರ್ಮಿಕರನ್ನು ಸಾಗಿಸುತ್ತಿದ್ದ ಟೆಂಪೊ ಪಲ್ಟಿ

ಉಡುಪಿ: ನೆನ್ನೆ ಸಂಜೆ ಕಾರ್ಮಿಕರನ್ನು ಸಾಗಿಸುತ್ತಿದ್ದ ಟೆಂಪೊವೊಂದು ಪಲ್ಟಿಯಾಗಿ 25 ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬೈಕಾಡಿ ಬಿ.ಸಿ. ರೋಡ್ ಬಳಿ ನಡೆದಿದೆ.

ಟೆಂಪೊದಲ್ಲಿ ಕಾಂಕ್ರೀಟ್ ಕೆಲಸಗಾರರನ್ನು ಕಾನೂನು ಬಾಹಿರವಾಗಿ ಸಾಗಿಸುತ್ತಿತ್ತು ಎನ್ನಲಾಗಿದೆ. ನಿಯಂತ್ರಣ ತಪ್ಪಿ ಟೆಂಪೊ ಪಲ್ಟಿಯಾಗಿದ್ದು, ಎಲ್ಲಾ ಪ್ರಯಾಣಿಕರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಇಬ್ಬರಿಗೆ ತೀವ್ರ ಗಾಯವುಂಟಾಗಿದ್ದು, ಗಾಯಾಳುಗಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ವ್ಯವಸ್ಥೆ ಅಸ್ಥವ್ಯಸ್ಥವಾಗಿತ್ತು, ನಂತರ ಬ್ರಹ್ಮಾವರ ಠಾಣೆ ಪೊಲೀಸರು ಆಗಮಿಸಿ ಸುಗಮಗೊಳಿಸಿದರು.

 
 
 
 
 
 
 
 
 
 
 

Leave a Reply