ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಜೀವನ ಕೌಶಲ್ಯಗಳು ಪಾತ್ರ ಮಹತ್ವದ್ದಾಗಿದೆ : ಡಾ. ಉದಯ ಶೆಟ್ಟಿ ಕೆ.

ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಇಲ್ಲಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರದಲ್ಲಿ ಜೀವನ ಕೌಶಲ್ಯಗಳು ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿ ನಡೆಯಿತು. ಕಾಲೇಜಿನ ವಾಣಿಜ್ಯಶಾಸ್ತç ವಿಭಾಗದ ಸಹಾಯಕ ಪಾತ್ರರಾದ ಡಾ. ಉದಯ ಶೆಟ್ಟಿ ಕೆ. ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿ – “ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯೆಯೊಂದಿಗೆ ಜೀವನ ಕೌಶಲ್ಯಗಳು ಅತೀ ಮಹತ್ವದ್ದಾಗಿದೆ. ಸಮಾಜದಲ್ಲಿ ಧೈರ್ಯಯುತವಾಗಿ ಬದುಕಲು ಜೀವನ ಕೌಶಲ್ಯಗಳು ಸಹಕಾರಿಯಾಗಿದೆ. ಜೀವನದಲ್ಲಿ ವಿಫಲವಾದಾಗಲೂ ಮುಂದಿನ ಬದುಕು ರೂಪಿಸಲು ಜೀವನ ಕೌಶಲ್ಯಗಳು ಸಹಕರಿಸುತ್ತದೆ” ಎಂದು ಜೀವನ ಕೌಶಲ್ಯಗಳನ್ನು ಶಿಬಿರಾರ್ಥಿಗಳಿಗೆ ತಿಳಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡ. ಜಯಪ್ರಕಾಶ್ ಶೆಟ್ಟಿ ಹೆಚ್. ವಹಿಸಿದ್ದರು. ಎನ್.ಎಸ್.ಎಸ್. ಯೋಜನಾಧಿಕಾರಿಗಳಾದ ಶ್ರೀಮತಿ ಸುಷ್ಮಾ ಟಿ. ಹಾಗೂ ಡಾ. ಮಹೇಶ್ ಕುಮಾರ್ ಕೆ.ಇ. ಉಪಸ್ಥಿತರಿದ್ದರು. ಶಿಬಿರಾರ್ಥಿ ಅನ್ವಿತಾ ನಿರೂಪಿಸಿದರು. ಕಿಶೋರ್ ಸ್ವಾಗತಿಸಿ, ದಿವ್ಯಾ ವಂದಿಸಿದರು.

 
 
 
 
 
 
 
 
 
 
 

Leave a Reply