Janardhan Kodavoor/ Team KaravaliXpress
24.6 C
Udupi
Monday, November 28, 2022
Sathyanatha Stores Brahmavara

ತಿರುಪತಿ ತಿಮ್ಮಪ್ಪನ ಬಳಿ 85,705 ಕೋಟಿ ರು. ಮೌಲ್ಯದಷ್ಟು ಸ್ಥಿರಾಸ್ತಿ!

ತಿರುಪತಿ ತಿಮ್ಮಪ್ಪ, ದೇವಾಲಯ ಜಮೀನು ಸೇರಿದಂತೆ ಒಟ್ಟು 85,705 ಕೋಟಿ ರು. ಮೌಲ್ಯದಷ್ಟು ಸ್ಥಿರಾಸ್ತಿ ಹೊಂದಿದೆ ಎಂದು ದೇಗುಲದ ಆಡಳಿತ ಮಂಡಳಿ ಹೇಳಿದೆ.

ದೇಗುಲದ ಒಟ್ಟು ಸ್ಥಿರಾಸ್ತಿ ಕುರಿತು ಶ್ವೇತಪತ್ರ ಬಿಡುಗಡೆ ಮಾಡಿರುವ ಟಿಟಿಡಿ (ತಿರುಮಲ ತಿರುಪತಿ ದೇವಸ್ಥಾನ ಸಮಿತಿ) ಮುಖ್ಯಸ್ಥ ವೈ.ವಿ.ಸುಬ್ಬಾರೆಡ್ಡಿ, ದೇಶದ ವಿವಿಧ ಕಡೆ ಒಟ್ಟು 7123 ಎಕರೆ ವ್ಯಾಪ್ತಿಯಲ್ಲಿ ತಿರುಪತಿ ದೇಗುಲದ 960 ಸ್ಥಿರಾಸ್ತಿಗಳಿವೆ ಎಂದು ಮಾಹಿತಿ ನೀಡಿದ್ದಾರೆ.

ತಿರುಪತಿ ತಿಮ್ಮಪ್ಪನ ಬಳಿ 14,000 ಕೆಜಿ ಚಿನ್ನ, 14,000 ಕೋಟಿ ರೂಪಾಯಿ ನಗದು ಕೂಡ ಇದೆ. ಒಂದು ವರ್ಷದ ಹಿಂದೆ ಟಿಟಿಡಿ 9 ಸಾವಿರ ಕೆಜಿ ಚಿನ್ನ, 12,000 ಕೋಟಿ ಠೇವಣಿ ಹೊಂದಿತ್ತು. ಕಾಣಿಕೆ ರೂಪದಲ್ಲಿ ತಿರುಪತಿ ತಿಮ್ಮಪ್ಪನಿಗೆ ವಾರ್ಷಿಕ 700 ಕೋಟಿ ರೂಪಾಯಿ ಆದಾಯ ಬರುತ್ತದೆ. ನವಿ ಮುಂಬೈನಲ್ಲಿ 500 ಕೋಟಿ ರೂಪಾಯಿ – ಮೌಲ್ಯದ ದೇವಾಲಯ ನಿರ್ಮಿಸಲಾಗುತ್ತಿದೆ. ಸರ್ಕಾರದ ಸೂಚನೆಯಂತೆ ಟಿಟಿಡಿ ಆಸ್ತಿ ಬಗ್ಗೆ ಶ್ವೇತಪತ್ರ ಪ್ರಕಟಿಸುತ್ತಿದ್ದು, ಈ ವರ್ಷದ ಆಸ್ತಿಯ ಮೌಲ್ಯವನ್ನು ವೆಬ್‌ಸೈಟ್ನಲ್ಲಿ ಪ್ರಕಟಿಸಲಾಗಿದೆ ಎಂದು ಟಿಟಿಡಿ ಅಧ್ಯಕ್ಷ ವೈ.ವಿ. ಸುಬ್ಬಾರೆಡ್ಡಿ ಹೇಳಿದ್ದಾರೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!