ಉಡುಪಿಯಲ್ಲಿ 113 ಜನರಿಗೆ ಕೊರೋನಾ ಪಾಸಿಟಿವ್

ಉಡುಪಿಯಲ್ಲಿ ಕೊರೊನಾ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಎಂಐಟಿ ಕ್ಯಾಂಪಸ್ ನ 72 ಮಂದಿ ಸೇರಿ ಮಾರ್ಚ್ 22 ರಂದು 113 ಜನರಿಗೆ ಕೊರೋನಾ ಪಾಸಿಟಿವ್ ವರದಿಯಾಗಿದೆ.

ಇಂದಿನ 113 ಪ್ರಕರಣಗಳಲ್ಲಿ ಮಣಿಪಾಲ ಎಂಐಟಿ ಕ್ಯಾಂಪಸ್ ನ 72 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ವರೆಗೆ ಒಟ್ಟು 372 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

 ಇದೀಗ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 439ಕ್ಕೆ ಏರಿಕೆಯಾಗಿದ್ದು, ಇಲ್ಲಿಯವರೆಗೆ 24328 ಕೋವಿಡ್ ಪ್ರಕರಣ ದಾಖಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

 
 
 
 
 
 
 
 
 
 
 

Leave a Reply