ತೊಕ್ಕೊಟ್ಟು ಫ್ಲೈಓವರ್ ಬಳಿ ಮಂಗಳವಾರ ನಡೆದ ಅಪಘಾತದಲ್ಲಿ ದಂಪತಿ ಸಾವು

ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಜಾಲ್ ನಿವಾಸಿ ರಾಯನ್ ಫೆರ್ನಾಂಡಿಸ್ (34) ಮತ್ತು ಪ್ರಿಯಾ ಫೆರ್ನಾಂಡಿಸ್ (25)ಮೃತರಾಗಿದ್ದಾರೆ. ಕಂಕನಾಡಿ ಖಾಸಗಿ ಆಸ್ಪತ್ರೆ ಸಿಬ್ಬಂದಿ ಯಾಗಿರುವ ಇಬ್ಬರು ಕರ್ತವ್ಯ ಮುಗಿಸಿ ಉಳ್ಳಾಲ ಮಾಸ್ತಿಕಟ್ಟೆಯ ಬಾಡಿಗೆ ಮನೆಗೆ ತೆರಳುವ ವೇಳೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಅಪಘಾತ ಸಂಭವಿಸಿದೆ.

ದಂಪತಿ ಇದ್ದ ಬೈಕ್ ಉಳ್ಳಾಲ ಕಡೆಗೆ ತಿರುಗುವ ಸಂದರ್ಭ ಅತಿ ವೇಗವಾಗಿ ತೊಕ್ಕೊಟ್ಟು ಫ್ಲೈಓವರ್ ಮೂಲಕ ಬಂದ ಲಾರಿ ಢಿಕ್ಕಿ ಹೊಡೆದು, ಇಬ್ಬರ ಮೇಲೂ ಚಲಿಸಿ ಕೆಲ ಮೀ. ದೂರಕ್ಕೆ ಎಳೆದುಕೊಂಡು ಹೋಗಿ ನಿಂತಿದೆ. ಘಟನೆಯಿಂದ ಪ್ರಿಯಾ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ರಾಯನ್ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಸಾವನ್ನಪ್ಪಿದ್ದಾರೆ.

ಇಬ್ಬರು ವಾರದ ಹಿಂದಷ್ಟೇ ಮಾಸ್ತಿಕಟ್ಟೆಯ ಬಾಡಿಗೆ ಮನೆಗೆ ಆಗಮಿಸಿದ್ದರು. ಮಂಗ ಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ.

 
 
 
 
 
 
 
 
 
 
 

Leave a Reply