ತುಳು ರಾಜ್ಯಭಾಷೆಯಾಗಲು ಪರಿಶೀಲಿಸಿ ಕ್ರಮ : ಬಿಎಸ್‌ವೈ

ತುಳು ರಾಜ್ಯ ಭಾಷೆಯಾಗಲು ಸೂಕ್ತವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು, ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ಅಕಾಡೆಮಿಯ ಮನವಿಯನ್ನು ಅಭ್ಯಸಿಸಿ ಸೂಕ್ತ ನಿರ್ಧಾರವನ್ನು ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್ ಅವರು ಇಂದು ಬೆಳಿಗ್ಗೆ ಮುಖ್ಯಮಂತ್ರಿಯವರನ್ನು ವಿಶೇಷವಾಗಿ ಭೇಟಿ ನೀಡಿ, ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿಸುವ ಮನವಿಯ ಬಗ್ಗೆ ಪ್ರತಿಕ್ರಿಯಿಸಿದರು, ಜೊತೆಗೆ ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ 3.6 ಕೋ.ರೂ. ಬಿಡುಗಡೆಯಾಗಿರುವ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

ಈ ಬಗ್ಗೆ “ಉದಯವಾಣಿ”ಯೊಂದಿಗೆ ದಯನಂದ ಜಿ. ಕತ್ತಲ್‌ಸಾರ್ ಮಾತನಾಡಿ, ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರನ್ನು ಭೇಟಿ ಮಾಡಿ, ತುಳುನಾಡಿನ ಸಮಸ್ತ ಜನರ ಬೇಡಿಕೆಯನ್ನು ಮನದಟ್ಟು ಮಾಡಲಾಗಿದೆ. ಆಶಾದಾಯಕ ಪ್ರತಿಕ್ರಿಯೆ ಸಿಕ್ಕಿದ್ದು, ನಮ್ಮ ಮನವಿಯನ್ನು ಸರಕಾರವು ಪುರಸ್ಕರಿಸಿದ್ದು ಭೇಟಿ ಫಲಪ್ರದವಾಗಿದೆ,

ಅಲ್ಲದೇ ತುಳು ಭವನಕ್ಕೆ ಬಿಡುಗಡೆಯಾಗಿರುವ 3.6 ಕೋ.ರೂ.ಗೆ ಆಡಳಿತಾತ್ಮಕ ಅನುಮೋದನೆ ಶೀಘ್ರವಾಗಿನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದರು.

 
 
 
 
 
 
 
 
 

Leave a Reply