ಉಡುಪಿ : ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾದಿಂದ ಸಂವಿಧಾನ ದಿನ ಆಚರಣೆ

ಉಡುಪಿ : ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ನೇತೃತ್ವದಲ್ಲಿ ನ.26ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಗೋಪಾಲ ಕಳಂಜಿ ವಹಿಸಿದ್ದರು.ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯಲಾಯಿತು.

ಕರ್ನಾಟಕ ಸರಕಾರದ ಮಾನ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಜ್ಯೋತಿ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಸಮಯೋಚಿತವಾಗಿ ಮಾತನಾಡಿದರು.

ದೇಶದ ಸಂವಿಧಾನದ ಆಶಯಗಳ ಬಗ್ಗೆ ಖ್ಯಾತ ಸಾಹಿತಿ ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ ಮತ್ತು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ವಿಸ್ತೃತ ಮಾಹಿತಿ ನೀಡಿದರು.

ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮುನ್ನಾ ಎರ್ಮಾಳು, ಶಿವಾನಂದ ತಲ್ಲೂರು, ತಿಲಕರಾಜ್ ಕುಂದಾಪುರ ಇವರನ್ನು ಸನ್ಮಾನಿಸಲಾಯಿತು.

ಜಿಲ್ಲೆಯ ಜಾನಪದ ಕ್ರೀಡೆ ಕಂಬಳದ ಕೋಣಗಳನ್ನು 30 ವರ್ಷಗಳಿಂದ ಸಾಕುತ್ತಿರುವ ಗುರುವ ಕೊರಗ ಇವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಖ್ಯಾತ ಜಾನಪದ ಕಲಾವಿದ ಗಣೇಶ್ ಗಂಗೊಳ್ಳಿ ಮತ್ತು ಕಿರಿಯ ವಯಸ್ಸಿನಲ್ಲೇ ಕೊರಗಜ್ಜನ ಹಾಡನ್ನು ಹಾಡುವ ಮೂಲಕ ಪ್ರಖ್ಯಾತರಾದ ಮಾಸ್ಟರ್ ಕಾರ್ತಿಕ್ ಇವರನ್ನು ಗೌರವಿಸಲಾಯಿತು. ಎಸ್.ಎಸ್.ಎಲ್.ಸಿ. ತರಗತಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ 30 ಮಂದಿ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಜಿಲ್ಲಾ ಎಸ್.ಸಿ. ಮೋರ್ಚಾ ಉಸ್ತುವಾರಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಪಕ್ಷದ ಪ್ರಮುಖರಾದ ಆನಂದ ಮಟಪಾಡಿ, ಎಸ್.ಸಿ. ಮೋರ್ಚಾ ಉಡುಪಿ ನಗರ ಮಂಡಲ ಅಧ್ಯಕ್ಷ ಕಿರಣ್, ಕುಂದಾಪುರ ಮಂಡಲ ಅಧ್ಯಕ್ಷ ಮಹೇಶ್ ಕಾಳಾವರ, ಬೈಂದೂರು ಮಂಡಲ ಅಧ್ಯಕ್ಷ ಚಂದ್ರ ಪಂಚವಟಿ, ಕಾರ್ಕಳ ಮಂಡಲ ಅಧ್ಯಕ್ಷ ಅನ್ನಿ ಕಾರ್ಕಳ ಹಾಗೂ ಎಸ್.ಸಿ. ಮೋರ್ಚಾ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಜಿಲ್ಲಾ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಸದಾನಂದ ಕಾಪು ಸ್ವಾಗತಿಸಿ, ವಂದಿಸಿ, ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ ಡಿ.ಬಿ. ಕಾರ್ಯಕ್ರಮ ನಿರೂಪಿಸಿದರು.

 
 
 
 
 
 
 
 
 
 
 

Leave a Reply