ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ (ರಿ.) ವತಿಯಿಂದ ವಿಪ್ರ ಮಹಿಳಾ ದಿನಾಚರಣೆ

ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ (ರಿ.) ವತಿಯಿಂದ ‘ವಿಪ್ರ ಮಹಿಳಾ ದಿನಾಚರಣೆ’ ಯನ್ನು 19-3-2022ನೇ ಶನಿವಾರ ಸಂಚೆ 5:30ರಿಂದ ಗುಂಡಿಬೈಲಿನ ಬ್ರಾಹ್ಮೀಸಭಾಭವನದಲ್ಲಿ ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆಯ ವೈದ್ಯರಾದ ಡಾ| ಸ್ವಾತಿ ಭಟ್ ಇವರಿಂದ “ಮಹಿಳೆಯರ ಆರೋಗ್ಯ ಸಮಸ್ಯೆಗಳು ಮತ್ತು ಪರಿಹಾರ” ಎಂಬ ವಿಷಯದ ಬಗ್ಗೆ ಮಾಹಿತಿ ಉಪನ್ಯಾಸ, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಸನ್ಮಾನ, ವಿದ್ಯಾರ್ಜನೆಗೆ ಸಹಾಯ, ಅಶಕ್ತರಿಗೆ ಸಹಾಯಧನ ಹಸ್ತಾಂತರ ಮುಂತಾದ ಸಾಮಾಜಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಪರಿಷತ್ತಿನ ಅಧ್ಯಕ್ಷರಾದ ಚೈತನ್ಯ ಎಂ.ಜಿ., ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply