ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಸಿಎಂ ಬೊಮ್ಮಾಯಿ ಭೇಟಿ

ಕರಾವಳಿಯ ಮೊಗವೀರ ಸಮಾಜದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿ

ಕಾಪು,: ಸುಮಾರು 36 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರವಾಗಿ ಜೀರ್ಣೋದ್ಧಾರಗೊಂಡಿರುವ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ರಾಜ್ಯದ ಮುಖ್ಯಂತ್ರಿ ಎಸ್.ಆರ್. ಬಸವರಾಜ ಬೊಮ್ಮಾಯಿ ಅವರು ಸೋಮವಾರ ಭೇಟಿ ನೀಡಲಿದ್ದಾರೆ.

ಎ. 11 ರಂದು ಬೆಳಗ್ಗೆ 11 ಗಂಟೆಗೆ ಉಚ್ಚಿಲ ಮಹಾಲಕ್ಷ್ಮೀ ಕ್ಷೇತ್ರಕ್ಕೆ ಭೇಟಿ ನೀಡಲಿರುವ ಅವರು ದೇಗುಲದಲ್ಲಿ ನಡೆಯುತ್ತಿರುವ ಬ್ರಹ್ಮಕಲಶ ಪುಣ್ಯೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ದೇವರ ದರ್ಶನ ಪಡೆದು ಬಳಿಕ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಸಚಿವರಾದ ಎಸ್. ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ವಿ. ಸುನೀಲ್ ಕುಮಾರ್ ಹಾಗೂ ಶಾಸಕರಾದ ಲಾಲಾಜಿ ಆರ್. ಮೆಂಡನ್, ರಘುಪತಿ ಭಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ವೇದವ್ಯಾಸ ಕಾಮತ್ ಸಹಿತ ವಿವಿಧ ಶಾಸಕರುಗಳು, ಸಚಿವರುಗಳು ಮತ್ತು ಗಣ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಥಮ ಬಾರಿಗೆ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಸಿದ್ಧತೆಗಳನ್ನು ನಡೆಸಲಾಗಿದೆ. ಈ ಸಂದರ್ಭ ಮಹಾಲಕ್ಷ್ಮೀ ಕ್ಷ್ರೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆಯೂ ಸೇರಿದಂತೆ ಮೊಗವೀರ ಸಮಾಜದ ಜನರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರಾವಳಿಯ ಸಮಸ್ತ ಮೀನುಗಾರರ ಪರವಾಗಿ ಮುಖ್ಯಮಂತ್ರಿಗಳಿಗೆ ನೀಡಲಾಗುವುದು ಎಂದು ಸಮಾಜದ ಮುಖಂಡ ನಾಡೋಜ ಡಾ| ಜಿ. ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply