ಅಂಬೇಡ್ಕರ್ ಓದು ಕಾರ್ಯಕ್ರಮ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಹೆಬ್ರಿ ಇವರ ಸಹಯೋಗದಲ್ಲಿ ಹೆಬ್ರಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಸರಕಾರಿ ಪದವಿ ಪೂರ್ವ ಕಾಲೇಜಿನ ಸಹಶಿಕ್ಷಕ ಹಾಗೂ ಜೆ.ಸಿ.ಐ ತರಬೇತುದಾರ ಪ್ರಕಾಶ್ ಪೂಜಾರಿ ಮಾತನಾಡಿ, ವಸಾಹತುಶಾಹಿಗಳ ಹಾಗೂ ರಾಜರುಗಳ ಕಾಲ ಗತಿಸಿ, ಮತಪೆಟ್ಟಿಗೆಯ ಮೂಲಕ ರಾಜರನ್ನು
ಚುನಾಯಿಸುತ್ತಿರುವ ಈ ದೇಶಕ್ಕೆ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರು ದೇಶ ಕಂಡ ಮಹಾನ್ ಮೇಧಾವಿ, ಶಿಕ್ಷಣ ಹಾಗೂ ಸಂವಿಧಾನ ತಜ್ಙ ಮತ್ತು ಬದಲಾವಣೆಯ ಹರಿಕಾರ. ಶತಮಾನಗಳಿಂದ ಮೇಲ್ವರ್ಗದ ಜನರಿಂದ ಶೋಷಣೆ ಹಾಗೂ ದಮನಕ್ಕೆ ಒಳಗಾದ ಜನರ ಭವಿಷ್ಯದ ಆಶಾಕಿರಣ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಎಂದರು.
ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸೀತಾನದಿ ವಿಠಲ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.

ಕಾಲೇಜಿನ ಪ್ರಾಂಶುಪಾಲ ಉಮೇಶ್ ಎ.ಡಿ ಅಧ್ಯಕ್ಷತೆ ವಹಿಸಿದ್ದರು.
ಅಂಬೇಡ್ಕರ್ ಕುರಿತ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ರಾವ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಬಲರಾಮ ವೈದ್ಯರು ನಿರೂಪಿಸಿದರು. ಹಿರಿಯ
ಉಪನ್ಯಾಸಕ ಅನಂತ ಪದ್ಮನಾಭ ವಂದಿಸಿದರು.

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply