ಉಡುಪಿ ಜಿಲ್ಲೆಯಲ್ಲಿ ಜೂ.16ರಂದು ಬುಕ್‌ಸ್ಟಾಲ್, ಮೊಬೈಲ್ ಅಂಗಡಿ ತೆರೆಯಲು ಅನುಮತಿ 

ಉಡುಪಿ: ಸರಕಾರದ ಮಾರ್ಗಸೂಚಿಯನ್ವಯ ಆಹಾರ, ಹಾಲು ಮುಂತಾದ ಅಗತ್ಯ ವಸ್ತುಗಳ ಅಂಗಡಿಗಳ ಸಮಯವನ್ನು ಬೆಳಗ್ಗೆ 6ಗಂಟೆಯಿಂದ ಮಧ್ಯಾಹ್ನ 2ಗಂಟೆಯವರೆಗೆ ವಿಸ್ತರಿಸಿ ಆದೇಶಿಸಲಾಗಿದೆ. 

ಈಗಾಗಲೇ ಆನ್‌ಲೈನ್ ತರಗತಿಗಳು ನಡೆಯುತ್ತಿರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ದೃಷ್ಠಿಯಿಂದ ಅವಶ್ಯಕವಾಗಿರುವ ಪುಸ್ತಕ, ಪೆನ್ನು ಮತ್ತು ಸ್ಟೇಶನರಿ ವಸ್ತುಗಳ ಹಾಗೂ ಮೊಬೈಲ್, ಮೊಬೈಲ್ ರಿಪೇರಿ ಹಾಗೂ ಪರಿಕರಗಳನ್ನು ಖರೀದಿಸಲು ಅವಕಾಶ ನೀಡಲಾಗಿದೆ.

ಜೂ.16, ಬುಧವಾರ ಒಂದು ದಿನದ ಮಟ್ಟಿಗೆ ಬೆಳಗ್ಗೆ 6ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಬುಕ್‌ಸ್ಟಾಲ್, ಸ್ಟೇಷನರಿ ಹಾಗೂ ಮೊಬೈಲ್ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply