ಉಡುಪಿ: ಶಿಕ್ಷಕಿ ಆತ್ಮಹತ್ಯೆ

ಖಿನ್ನತೆಗೆ ಒಳಗಾಗಿ ಶಾಲಾ ಶಿಕ್ಷಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಲೆವೂರಿನಲ್ಲಿ ನಡೆದಿದೆ. ಅಮೃತಾ  (32ವ.) ಆತ್ಮಹತ್ಯೆ ಮಾಡಿಕೊಂಡವರು. ಅಮೃತಾ ಅವರು ಸುಮಾರು 8 ವರ್ಷದಿಂದ ಸ್ಕೊಲ್‌ ನಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. 
ಇತ್ತೀಚೆಗೆ ಕೆಲಸದ ಒತ್ತಡದಿಂದ ಖಿನ್ನತೆಗೆ ಒಳಗಾಗಿದ್ದ ಅವರು ನ. 21 ರಂದು ರಾತ್ರಿ ತಾನು ವಾಸವಿದ್ದ ಮನೆಯಲ್ಲಿ ನೇಣು ಬೀಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 
ಈ ಬಗ್ಗೆ ಮೃತರ ತಂದೆ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಗಂಡ ಹಾಗೂ ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
 
 
 
 
 
 
 
 
 
 
 

Leave a Reply