ಹಾಲಿನ ಖರೀದಿ ದರ ಕನಿಷ್ಠ ಐದು ರೂಪಾಯಿ ಕೂಡಲೇ ಏರಿಸಬೇಕೆಂದು ಸಹಕಾರ ಭಾರತಿ ಒತ್ತಾಯ

ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಉಡುಪಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಹೈನುಗಾರ ರೈತರಿಂದ ಖರೀದಿಸುವ ಹಾಲಿನ ಖರೀದಿ ದರ ಕನಿಷ್ಠ ಐದು ರೂಪಾಯಿ ಕೂಡಲೇ ಏರಿಸಬೇಕೆಂದು ಒತ್ತಾಯಿಸಿ, ಉಡುಪಿ ಜಿಲ್ಲೆಗೆ ಪ್ರತ್ಯೇಕ ಹಾಲು ಉತ್ಪಾದಕರ ಒಕ್ಕೂಟ ರಚನೆ ಮತ್ತು ಸಾಲ ಮನ್ನಾ ಯೋಜನೆಯಲ್ಲಿ ಬಾಕಿ ಉಳಿದಿರುವ ಉಡುಪಿ ಜಿಲ್ಲೆಯ ರೈತರ ಕೃಷಿ ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿ ಸಮಸ್ತ ರೈತಾಪಿ ಜನರ ಪರವಾಗಿ ಸಹಕಾರ ಭಾರತಿ ವತಿಯಿಂದ ಜಿಲ್ಲಾಧ್ಯಕ್ಷರಾದ ಶ್ರೀ ಬೋಳ ಸದಾಶಿವ ಶೆಟ್ಟಿ ಅವರು ಮುಖ್ಯಮಂತ್ರಿಗಳಿಗೆ ಮನವಿ ನೀಡಿದರು. ಈ ಸಂದರ್ಭದಲ್ಲಿ ಸಹಕಾರ ಭಾರತಿ ಹಾಲು ಪ್ರಕೋಷ್ಟದ ರಾಜ್ಯ ಸಂಚಾಲಕರಾದ ಸಾಣೂರು ನರಸಿಂಹ ಕಾಮತ್, ಜಿಲ್ಲಾ ಸಂಚಾಲಕರಾದ ಶ್ರೀ ಕೆ. ಕಮಲಾಕ್ಷ ಹೆಬ್ಬಾರ್ ಮತ್ತು ಮಹಿಳಾ ಪ್ರಮುಖರಾದ ಶ್ರೀಮತಿ ವಿದ್ಯಾ ವಿಜೇತ ಪೈ ಜೊತೆಗಿದ್ದರು.

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply