Janardhan Kodavoor/ Team KaravaliXpress
25.6 C
Udupi
Saturday, December 3, 2022
Sathyanatha Stores Brahmavara

ಆರೋಗ್ಯ ಸಿಬ್ಬಂದಿಗಳಲ್ಲಿ ಒತ್ತಡ ನಿರ್ವಹಣೆ ಕುರಿತಾಗಿ ಮಾಹಿತಿ ಕಾರ್ಯಗಾರ

ದಿನಾಂಕ 7/11/2022 ಸೋಮವಾರ, ಬೆಳಿಗ್ಗೆ 9.30 ರಂದು ಡಾ. ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ಕಮಲ್ ಎ ಬಾಳಿಗ ಸಭಾಂಗಣದಲ್ಲಿ ಭಾರತೀಯ ವೈದ್ಯಕೀಯ ಸಂಘ ಉಡುಪಿ- ಕರಾವಳಿ, ಡಾ ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆ, ಉಡುಪಿ , ಕಮಲ್ ಎ ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬೈ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ ಜಿಲ್ಲೆ, ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇದರ ಜಂಟಿ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಆರೋಗ್ಯ ಸಿಬ್ಬಂದಿಗಳಲ್ಲಿ ಒತ್ತಡ ನಿರ್ವಹಣೆ ಕುರಿತಾಗಿ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಡಾ ಕೇಶವ ನಾಯಕ್, ಕಾರ್ಯದರ್ಶಿಗಳು ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ, ಮೂಳೆ ತಜ್ಞರು ಹೈಟೆಕ್ ಆಸ್ಪತ್ರೆ ಉಡುಪಿ ಇವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಡಾ ಲತಾ ನಾಯಕ್ ಎಸ್. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಉಡುಪಿ ಜಿಲ್ಲೆ , ಇನ್ನೊರ್ವ ಅತಿಥಿಗಳಾಗಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಮನು ಆನಂದ್ ಮನೋವೈದ್ಯರು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ ಜಿಲ್ಲೆ ಇವರು ಆಗಮಿಸಿದ್ದರು. ಮತ್ತು ಡಾ ದೀಪಕ್ ಮಲ್ಯ ಖಜಾಂಚಿ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ, ಮನೋವೈದ್ಯರು ಡಾ. ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆ, ಡಾ ವಿರುಪಾಕ್ಷ ದೇವರಮನೆ ಮನೋವೈದ್ಯರು ಡಾ ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆ, ಡಾ. ಮಾನಸ ಇ ಆರ್ ಮನೋವೈದ್ಯರು , ಡಾ ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಪಿ ವಿ ಭಂಡಾರಿ ಅಧ್ಯಕ್ಷರು ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ, ನಿರ್ದೇಶಕರು ಹಾಗೂ ಮನೋವೈದ್ಯರು ಡಾ ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿ ಇವರು ವಹಿಸಿದ್ದರು. ಅಪ್ತಸಮಲೋಚಕರಾದ ಶ್ರೀಮತಿ ಪದ್ಮ ರಾಘವೇಂದ್ರ ಇವರು ಪ್ರಾರ್ಥಿಸಿದರು. ಆಸ್ಪತ್ರೆಯ ಆಡಳಿತಾಧಿಕಾರಿಯಾದ ಶ್ರೀಮತಿ ಸೌಜನ್ಯ ಶೆಟ್ಟಿ ಇವರು ಸ್ವಾಗತಿಸಿದರು. ಮನೋವೈದ್ಯರಾದ ಡಾ ಮಾನಸ ಇ ಆರ್ ಇವರು ವಂದಿಸಿದರು. ಆಸ್ಪತ್ರೆಯ ಆಪ್ತಸಮಲೋಚಕರಾದ ಶ್ರೀಮತಿ ಅಕ್ಷಯ ಶ್ರೀಮತಿ ಪೂರ್ಣಿಮಾ ಇವರು ನಿರೂಪಿಸಿದರು.
ಉದ್ಘಾಟನಾ ಸಮಾರಂಭದ ನಂತರ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಸಂವಹನ ಎಷ್ಟು ಮುಖ್ಯವಾಗಿರುತ್ತದೆ ಎಂಬ ವಿಷಯದ ಕುರಿತು ಕಿರು ಪ್ರಹಸನ ಮಾಡಿದರು.
ತದ ನಂತರ ಮಾಹಿತಿ ಕಾರ್ಯಗಾರ ನಡೆಯಿತು 1.ಸಂವಹನ ಕೌಶಲ್ಯ ಎಂಬ ವಿಷಯದ ಕುರಿತು ಡಾ ಪಿ ವಿ ಭಂಡಾರಿ ಇವರು ಮಾಹಿತಿ ನೀಡಿದರು.
2. ಡಾ ಮನು ಆನಂದ್,ಮಾನಸಿಕ ಕಾಯಿಲೆಗಳ ಕುರಿತು ಮಾಹಿತಿ ನೀಡಿದರು
3. ಡಾ ಮಾನಸ ಇ ಆರ್ ಒತ್ತಡ ನಿರ್ವಹಣೆ ಕುರಿತಾಗಿ ಮಾಹಿತಿ ನೀಡಿದರು

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!