(ಜೂ. 27) ಉಡುಪಿ ಜಿಲ್ಲೆಯಲ್ಲಿ ಗುರುವಾರ  ಶಾಲೆಗಳಿಗೆ ರಜೆ ಇಲ್ಲ – ಡಾ. ವಿದ್ಯಾ ಕುಮಾರಿ

ಉಡುಪಿ: ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ದಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಣೆ ಮಾಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಮಳೆ ಕಡಿಮೆ ಇರುವ ಕಾರಣ ಶಾಲಾ ಕಾಲೇಜುಗಳಿಗೆ ರಜೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ತಿಳಿಸಿದ್ದಾರೆ

ಮಳೆ ಪ್ರಮಾಣ ಹೆಚ್ಚಾದರೆ ಮುಂದಿನ ಪರಿಸ್ಥಿತಿ ಅವಲೋಕಿಸಿ ರಜೆ ಘೋಷಿಸುವ ಸಾಧ್ಯತೆ ಇದೆ. ಆದರೆ ಸದ್ಯಕ್ಕೆ ಉಡುಪಿ ಜಿಲ್ಲೆಗೆ ರಜೆಯಿರುವುದಿಲ್ಲ ಎಂದು ಅವರು ಹೇಳಿದ್ದಾರೆ.

 
 
 
 
 
 
 
 
 
 
 

Leave a Reply