ಉಡುಪಿ ಜಿಲ್ಲಾ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ

ಏಪ್ರಿಲ್ 14 ,15, 16 ರಂದು ನಡೆಯಲಿರುವ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ 15ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ದುಬೈ ಉದ್ಯಮಿ ಹೊರನಾಡ ಕನ್ನಡಿಗ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರು ಇಂದು ವಿದ್ಯುಕ್ತವಾಗಿ ಬಿಡುಗಡೆಗೊಳಿಸಿದರು. ಆಹ್ವಾನ ಪತ್ರಿಕೆಯನ್ನು ಬಿಡುಗಡೆ ಮಾಡಿದ ಪ್ರವೀಣ್ ಶೆಟ್ಟಿ ಅವರು ನಾಡು ನುಡಿ ಸಂಸ್ಕೃತಿ ಸಾಹಿತ್ಯ ನೆಲ-ಜಲ ಇದರ ಸಂರಕ್ಷಣೆಯಲ್ಲಿ ಕನ್ನಡ ಸಾಹಿತ್ಯಪರಿಷತ್ತಿನ ಪಾತ್ರ ಹಿರಿದು ಎಂದು ಅಭಿಪ್ರಾಯಪಟ್ಟರು. ಇದೇ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ಸರ್ವತೋಮುಖ ಬೆಳವಣಿಗೆಗೆ ಹೊರನಾಡ ಕನ್ನಡಿಗರಾದ ನಮ್ಮ ಸಹಕಾರ ನಿರಂತರವಾಗಿ ಇರಲಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ,ಗೌರವ ಕಾರ್ಯದರ್ಶಿ ಸುಬ್ರಮಣ್ಯ ಶೆಟ್ಟಿ, ಕೋಶಾಧ್ಯಕ್ಷರಾದ ಮನೋಹರ ಪಿ.,ಉಡುಪಿ ತಾಲೂಕು ಕಸಾಪ ಅಧ್ಯಕ್ಷ ರವಿರಾಜ್ ಎಚ್.ಪಿ. ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply