ನಿರಂತರ ಮಳೆ ಹಿನ್ನಲೆ: ಉಡುಪಿ ಜಿಲ್ಲೆಯಲ್ಲಿ ಮೇ 20 (ಶುಕ್ರವಾರ) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ, ಮುಂಜಾಗ್ರತಾ ಕ್ರಮವಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:20.05.2022 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ /ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಕೂರ್ಮರಾವ್‌ ಎಂ ಆದೇಶ ಹೊರಡಿಸಿದ್ದಾರೆ.

 
 
 
 
 
 
 
 
 
 
 

Leave a Reply