ಬಾಲಕಿಯರ ಸರಕಾರಿ ಪ್ರೌಢಶಾಲೆ ಉಡುಪಿ ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿನಿಯರಿಗೆ ಅಭಿನಂದನಾ ಸಮಾರಂಭ

ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇದರ ಪ್ರೌಢಶಾಲಾ ವಿಭಾಗದಲ್ಲಿ 2022 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿನ ಸಾಧಕ ವಿದ್ಯಾರ್ಥಿನಿಯರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.

ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶಾಸಕ ಶ್ರೀ ಕೆ ರಘುಪತಿ ಭಟ್ ಮಾತನಾಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದು, ತಮ್ಮ ಈ ಸಾಧನೆ ಮುಂದಿನ ವರ್ಷದ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಲಿ ಎಂದರು.

ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಶ್ರೀ ಯಶ್ ಪಾಲ್ ಸುವರ್ಣ ಮಾತನಾಡಿ ಬಡ ಕುಟುಂಬದ ವಿದ್ಯಾರ್ಥಿನಿ ಕುಮಾರಿ ಗಾಯತ್ರಿ 625 ಅಂಕಗಳಿಸಿ ರಾಜ್ಯಕ್ಕೇ ಪ್ರಥಮ ಸ್ಥಾನಿಯಾಗಿ, ಪ್ರಸಕ್ತ ಸಾಲಿನಲ್ಲಿ ಶಾಲೆಯಲ್ಲಿ ಗೊಂದಲ ಸೃಷ್ಟಿಸಿ ಬಡ ವಿದ್ಯಾರ್ಥಿನಿಯರ ಶಿಕ್ಷಣವನ್ನು ಮೊಟಕುಗೊಳಿಸಲು ಯತ್ನಿಸಿದವರಿಗೆ ತನ್ನ ಸಾಧನೆಯ ಮೂಲಕ ಉತ್ತರ ನೀಡಿದ್ದಾಳೆ. ಹೃದ್ರೋಗ ತಜ್ಞೆ ಯಾಗುವ ಕನಸು ಹೊಂದಿರುವ ಗಾಯತ್ರಿಯ ಮುಂದಿನ ವಿದ್ಯಾಭ್ಯಾಸದ ಸಂಪೂರ್ಣ ವೆಚ್ಚವನ್ನೂ ವೈಯುಕ್ತಕವಾಗಿ ಭರಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಶಾಲೆಯ 50 ಮಂದಿ ಸಾಧಕ ವಿದ್ಯಾರ್ಥಿನಿಯರಿಗೆ ಯಶ್ ಪಾಲ್ ಸುವರ್ಣ ನಗದು ಪುರಸ್ಕಾರ ನೀಡಿ ಅಭಿನಂದಿಸಿದರು.

ಸಮಾರಂಭದಲ್ಲಿ ಉಡುಪಿ ನಗಸಭೆಯ ಸದಸ್ಯರಾದ ಶ್ರೀ ರಶ್ಮಿ ಸಿ. ಭಟ್, ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರುದ್ರೇ ಗೌಡ, ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀ ವಿಶ್ವನಾಥ ಬಾಯರಿ, ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಜಯಲಕ್ಷ್ಮೀ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ವಿನೋದ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply