ಸೇವಾ ಮನೋಭಾವದಿಂದ ಸಂಘಟನೆ ಸದೃಢ : ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ

ಉಡುಪಿ, ಜೂನ್ 26 (ಕವಾ): ಕಾರ್ಯ ತತ್ಪರತೆ, ತ್ಯಾಗ ಮನೋಭಾವದಿಂದ ಸಂಘಟನೆ ಸದೃಡಗೊಳ್ಳಲು ಸಾಧ್ಯ ಎಂದು ಕರ್ನಾಟಕ
ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದ್ದಾರೆ.
ಅವರು ಇಂದು ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆದ ಉಡುಪಿ ಜಿಲ್ಲಾ ಸರಕಾರಿ ನೌಕರರ ವಾರ್ಷಿಕ ಸಮಾವೇಶ 2021 ಮತ್ತು ಸೇವಾ ನಿವೃತ್ತಿಗೊಳ್ಳುತ್ತಿರುವ ಉಡುಪಿ ಜಿಲ್ಲಾ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಅವರ
ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
ಉಡುಪಿಯ ಸರಕಾರಿ ನೌಕರರ ಸಮಸ್ಯೆಗಳನ್ನು ಬಗ್ಗೆ ಅರಿತು ,ಆ ಕುರಿತು ರಾಜ್ಯಮಟ್ಟದ ಸಭೆಯಲ್ಲಿ ಚಿರ್ಚಿಸಿ ಅವುಗಳ ಪರಿಹಾರಕ್ಕೆ ಉಡುಪಿ ಜಿಲ್ಲಾ ಸಂಘದ ಅಧ್ಯಕ್ಷ ಸುಬ್ರಹಣ್ಯ ಶೇರಿಗಾರ್ ಶ್ರಮಿಸುತ್ತಿದ್ದರು, ಜಿಲ್ಲೆಯ ಮಾತ್ರವಲ್ಲದೇ ರಾಜ್ಯದ ಎಲ್ಲಾ ನೌಕರರ
ಸಮಸ್ಯೆಗಳ ಬಗ್ಗೆ ಸಮರ್ಥವಾಗಿ ತಮ್ಮ ವಾದ ಮಂಡನೆ ಮಾಡುವ ಮೂಲಕ ಉತ್ತಮ ನಾಯಕತ್ವ ಗುಣಗಳನ್ನು ಹೊಂದಿದ್ದು, ತಮ್ಮ ಸೇವಾ ಮನೋಭಾವದ ಮೂಲಕ ಎಲ್ಲರನ್ನೂ ಒಗ್ಗೂಡಿಸುವ ಮತ್ತು ನೌಕರರಿಗೆ ಆತ್ಮಸ್ಥೆöÊರ್ಯ ತುಂಬುವ ಮೂಲಕ 3
ಬಾರಿ ಉಡುಪಿ ಜಿಲ್ಲಾಧ್ಯಕ್ಷರಾಗಿ ತಮ್ಮ ಸಾಧನೆಯ ಮೂಲಕ ಅಗ್ರಪಂಕ್ತಿಯಲ್ಲಿದ್ದಾರೆ ಎಂದು ಸಿ.ಎಸ್.ಷಡಾಕ್ಷರಿ ಹೇಳಿದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಮೂಲಕ ಜಿಲ್ಲೆಯಲ್ಲಿ ಹಲವು
ಸಮಾಜಮುಖಿ ಕಾರ್ಯಗಳನ್ನು ಮಾಡಿರುವ ಸುಬ್ರಹ್ಮಣ್ಯ ಶೇರಿಗಾರ್ ಅವರು, ಸರಕಾರಿ ನೌಕರರ ಸೇವೆ ಮಾತ್ರವಲ್ಲದೇ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಹೊರಗುತ್ತಿಗೆ ನೌಕರರ ಸಮಸ್ಯೆಗಳಿಗೂ ಸ್ಪಂದಿಸುತ್ತಿದ್ದು, ಕೋವಿಡ್ ಅವಧಿಯಲ್ಲಿ ಕಾರ್ಯ ನಿರ್ವಹಿಸದ್ದ ಹೊರಗುತ್ತಿಗೆ ನೌಕರರ ಸೇವೆಯನ್ನು ಗುರುತಿಸಿ ಅಭಿಂದಿಸಿದ್ದರು, ಸರ್ವೋತ್ತಮ ಸೇವಾ ಪ್ರಶಸ್ತಿ ಆಯ್ಕೆ ಸಂದರ್ಭದಲ್ಲಿ ಸಹ ಪ್ರಾಮಾಣಿಕ ಮತ್ತು ಪಾರದರ್ಶಕ ಆಯ್ಕೆ ನಡೆಯುವಂತೆ ನೋಡಿಕೊಂಡಿದ್ದ ಅವರು, ನೌಕರರ ಕಾರ್ಯ ಒತ್ತಡವನ್ನು ತಿಳಿದು
ಅವರಿಗಾಗಿ ವಿಶೇಷ ಕಾರ್ಯಾಗಾರ ಸಹ ಆಯೋಜಿಸಿದ್ದು, ನೌಕರರ ಎಲ್ಲಾ ಚಟುವಟಿಕೆಗಳಿಗೆ ಅಗತ್ಯ ಪ್ರೋತ್ಸಾಹ ನೀಡುತ್ತಿದ್ದರು
ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಆಶಯ ನುಡಿ ಕಾರ್ಯಕ್ರಮ ನೆರವೇರಿಸಿದರು. ಸುಬ್ರಹ್ಮಣ್ಯ ಶೇರಿಗಾರ್ ಅವರ ಪತ್ನಿ ಸಜನಿ ಸುಬ್ರಹ್ಮಣ್ಯ , ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವಿವಿಧ ಪದಾಧಿಕಾರಿಗಳಾದ
ವೆಂಕಟೇಶಯ್ಯ, ಮಲ್ಲಿಕಾರ್ಜುನ ಬಳ್ಳಾರಿ, ರುದ್ರಪ್ಪ, ಬಸವರಾಜು, ರವಿ, ಮೋಹನ್ ಕುಮಾರ್, ಹರ್ಷ,ಸತೀಶ್ ಸಿದ್ದರಾಮಣ್ಣ, ದ.ಕನ್ನಡ ಜಿಲ್ಲಾ ಸರ್ಕಾರಿ ನೌಕರರ ಸಂಘದ ಕೃಷ್ಣ, ಉಡುಪಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಕಿರಣ್
ಹೆಗ್ಡೆ, ಉಡುಪಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಶರೀಫ ಮ ರೋಣ, ಕಾರ್ಕಳ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಾಲಕೃಷ್ಣ, ಹೆಬ್ರಿ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹರೀಶ್
ಪೂಜಾರಿ, ಕಾಪು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾಗೇಶ್ ಬಿಲ್ಲವ,ಮತ್ತಿತರರು ಉಪಸ್ಥಿತರಿದ್ದರು.

ಅಭಿನಂದನಾ ಸಮಿತಿ ಅಧ್ಯಕ್ಷ ಅಂಪಾರು ದಿನಕರ ಶೆಟ್ಟಿ ಸ್ವಾಗತಿಸಿದರು. ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿದರು. ಅಭಿನಂದನಾ ಸಮಿತಿ ಸದಸ್ಯ ಗಣಪತಿ ಹೋಬಳಿದಾರ್ ವಂದಿಸಿದರು.

 
 
 
 
 
 
 
 
 
 
 

Leave a Reply