ಉಡುಪಿ ನಗರಸಭಾ ವ್ಯಾಪ್ತಿಯ ಅಂತರ್ ಇಲಾಖಾ ಮಟ್ಟದ ಸಮನ್ವಯ ಸಮಿತಿ ಸಭೆ

ಉಡುಪಿ ನಗರ ಸಭೆಯಲ್ಲಿ ಇಂದು ದಿನಾಂಕ 15-07-2022 ರಂದು ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ ಅವರ ಅಧ್ಯಕ್ಷತೆಯಲ್ಲಿ ನಡೆದ “ಉಡುಪಿ ನಗರಸಭಾ ವ್ಯಾಪ್ತಿಯ ಅಂತರ್ ಇಲಾಖಾ ಮಟ್ಟದ ಸಮನ್ವಯ ಸಮಿತಿ ಸಭೆ”ಯಲ್ಲಿ ಶಾಸಕ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.

ಸಭೆಯಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಸಲುವಾಗಿ ವಿವಿಧ ರೀತಿಯ ಕಾಮಗಾರಿಗಳನ್ನು ಶೀಘ್ರದಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಪೌರಾಯುಕ್ತರಾದ ಉದಯ್ ಶೆಟ್ಟಿ, ಉಪ ಅರಣ್ಯಾಧಿಕಾರಿಗಳಾದ ಆಶಿಶ್ ರೆಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ಟಿ ಸಿದ್ದಲಿಂಗಪ್ಪ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply