Janardhan Kodavoor/ Team KaravaliXpress
25.6 C
Udupi
Saturday, December 3, 2022
Sathyanatha Stores Brahmavara

ಆ.28ರಂದು ಬ್ರಹ್ಮಾವರದ ಎಸ್.ಎಮ್.ಎಸ್ ಕಾಂಪ್ಲೆಕ್ಸ್ ನಲ್ಲಿ ‘ಉಡುಪಿಯನ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ(ನಿ.)’ ಉದ್ಘಾಟನೆ

ಉಡುಪಿ ಜಿಲ್ಲೆಯ ಉದ್ಯಮ ಕೇಂದ್ರವಾಗಿ ಬೆಳೆಯುತ್ತಿರುವ ಬ್ರಹ್ಮಾವರದ ಸಹಕಾರಿ ಕ್ಷೇತ್ರದ ಮಜಲಿನಲ್ಲಿ ಇನ್ನೊಂದು ಹೊಸ ಪೈರಿನ ತೆನೆ ಅರಳಲು ಸಜ್ಜಾಗಿದೆ. ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಉಡುಪಿಯನ್ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ(ನಿ.) ಆಗಸ್ಟ್ 28, ರವಿವಾರ ಬೆಳಿಗ್ಗೆ 10.00 ಗಂಟೆಗೆ ಬ್ರಹ್ಮಾವರದ ಎಸ್.ಎಮ್.ಎಸ್. ಚರ್ಚ್ ಕಾಂಪ್ಲೆಕ್ಸ್ ನ 2ನೇ ಮಹಡಿಯಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಸಚಿನ್ ಪೂಜಾರಿ ತಿಳಿಸಿದ್ದಾರೆ.

ಉಡುಪಿಯ ಕ್ರೆಡಿಟ್ ಕೋ-ಅಪರೇಟೀವ್ ಸೊಸೈಟಿ(ನಿ.) ಇದರ ಅಧ್ಯಕ್ಷ ಸಚಿನ್ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯುವ ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ಸರಕಾರದ ಮಾನ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ದೀಪ ಪ್ರಜ್ವಲನೆಗೈಯಲಿದ್ದಾರೆ.

ಉಡುಪಿ ಶಾಸಕ ಕೆ.ರಘುಪತಿ ಭಟ್ ನೂತನ ಸಂಸ್ಥೆಯನ್ನು ಉದ್ಘಾಟಿಸಲಿದ್ದಾರೆ.

ಮಹಾಲಕ್ಷ್ಮೀ ಕೋ-ಅಪರೇಟಿವ್ ಬ್ಯಾಂಕ್ ಲಿ. ಅಧ್ಯಕ್ಷ ಯಶ್ಪಾಲ್ ಎ. ಸುವರ್ಣ ಭದ್ರತಾ ಕೊಠಡಿಯನ್ನು ಉದ್ಘಾಟಿಸಲಿರವರು.

ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಪ್ರಮೋದ್‌ ಮಧ್ವರಾಜ್, ಮಾಜಿ ಸಚಿವರು, ಕರ್ನಾಟಕ ಸರಕಾರ; ಮಟ್ಟಾರು ರತ್ನಾಕರ ಹೆಗ್ಡೆ, ಅಧ್ಯಕ್ಷರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರ; ಮನೋಹರ್ ಎಸ್. ಕಲ್ಮಾಡಿ, ಅಧ್ಯಕ್ಷರು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ; ಶ್ರೀಮತಿ ವೀಣಾ ವಿ. ನಾಯ್ಕ್, ಅಧ್ಯಕ್ಷರು, ಬಿಜೆಪಿ ಉಡುಪಿ ಗ್ರಾಮಾಂತರ; ಶಿರಿಯಾರ ಗಣೇಶ್ ನಾಯಕ್‌, ಮಾಲಕರು, ದೀಪ್ತಿ ಎಂಟರ್‌ಪ್ರೈಸಸ್‌; ಬಿರ್ತಿ ರಾಜೇಶ್ ಶೆಟ್ಟಿ, ನಿರ್ದೇಶಕರು, ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘ(ನಿ.); ಪ್ರತಾಪ್ ಹೆಗ್ಡೆ ಮಾರಾಳಿ, ಮಾಜಿ ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯರು; ಬಿ.ಎನ್‌. ಶಂಕರ ಪೂಜಾರಿ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಜಯಕರ ಶೆಟ್ಟಿ ಇಂದ್ರಾಳಿ, ಅಧ್ಯಕ್ಷರು, ಉಡುಪಿ ಜಿಲ್ಲಾ ಕೋ-ಆಪರೇಟಿವ್ ಯೂನಿಯನ್; ಸಿ.ಎ. ದೇವ್ ಆನಂದ್, ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ (2024-25); ಸಿ.ಎ. ಜೀವನ್ ಶೆಟ್ಟಿ, ಚಾರ್ಟೆಡ್ ಅಕೌಂಟೆಂಟ್, ಉಡುಪಿ; ಉಮೇಶ್ ಎ. ನಾಯ್ಕ್, ಸ್ನೇಹ ಟುಟೋರಿಯಲ್ ಉಡುಪಿ; ಕೆ.ಆರ್. ರೋಹಿತ್‌, ಪ್ರ.ದ.ಸ. ಸಹಕಾರಿ ಸಂಘಗಳ ಉಪ ನಿಬಂಧಕರ ಕಛೇರಿ ಉಡುಪಿ; ಜೀವನ್‌ ಶೆಟ್ಟಿ ಬೈಕಾಡಿ, ಉದ್ಯಮಿಗಳು, ಬ್ರಹ್ಮಾವರ; ಶ್ರೀಮತಿ ನಾಗವೇಣಿ, ಅಧ್ಯಕ್ಷರು, ವಾರಂಬಳ್ಳಿ ಗ್ರಾಮ ಪಂಚಾಯತ್; ವೆಂಕಟೇಶ್ ಶೇಟ್, ಉದ್ಯಮಿಗಳು, ಕುಂದಾಪುರ ಇವರು ಭಾಗವಹಿಸಲಿರುವರು.

ಸೊಸೈಟಿಯ ಉಪಾಧ್ಯಕ್ಷ ಮೋಹನ್ ಖಾರ್ವಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕಿಶೋರ್ ಹಾಗೂ ನಿರ್ದೇಶಕರುಗಳಾದ ಧೀರಜ್ ಕುಮಾರ್ ಶೆಟ್ಟಿ, ರಾಜು ಪೂಜಾರಿ, ಸುದರ್ಶನ್, ವಿಶ್ವನಾಥ್ ಕಲ್ಮಾಡಿ, ರಮಾನಾಥ ಖಾರ್ವಿ, ಕೇಶವ ಆಚಾರ್ಯ, ನಂದು ಖಾರ್ವಿ, ವೀಣಾ ವಿ. ನಾಯ್ಕ್, ಗೀತಾ ನಾರಾಯಣ ಪೂಜಾರಿ, ಜ್ಯೋತಿ ಹಾಗೂ ಸಿಬ್ಬಂದಿ ವರ್ಗ ಮತ್ತು ಸಂಸ್ಥೆಯ ಪಾಲು ಬಂಡವಾಳದಾರರು ಉಪಸ್ಥಿತರಿರುವರು.

ಸಹೃದಯಿ ಸಹಕಾರಿ ಕ್ಷೇತ್ರದ ಬಂಧುಗಳು, ಸಾರ್ವಜನಿಕ ಬಂಧುಗಳು ಹಾಗೂ ಹಿತೈಷಿಗಳು ಸೊಸೈಟಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗಿಗಳಾಗಿ ನೂತನ ಸಂಸ್ಥೆಗೆ ಪೂರ್ಣ ಪ್ರಮಾಣದ ಸಹಕಾರ ಮತ್ತು ಪ್ರೋತ್ಸಾಹವನ್ನಿತ್ತು ಹರಸಬೇಕು ಎಂದು ಸೊಸೈಟಿಯ ಅಧ್ಯಕ್ಷ ಸಚಿನ್ ಪೂಜಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!