ಉಡುಪಿಯಲ್ಲಿ ಇ.ಆರ್.ಎಸ್.ಎಸ್. ವಾಹನಗಳಿಗೆ ಚಾಲನೆ

ಉಡುಪಿ: ಇಂದು ಉಡುಪಿ ಜಿಲ್ಲೆಯಲ್ಲಿ 12 ಇ.ಆರ್.ಎಸ್.ಎಸ್. ವಾಹನಗಳಿಗೆ ಚಾಲನೆ ನೀಡಲಾಗಿದೆ. ಸಾರ್ವಜನಿಕರು ಇನ್ನು ಮುಂದಕ್ಕೆ ಟೋಲ್ ಫ್ರೀ ನಂಬರ್ 100ರ ಬದಲಾಗಿ 112ಕ್ಕೆ ಕರೆ ಮಾಡಿದಲ್ಲಿ ಅವಶ್ಯಕತೆ ಇರುವ ಸ್ಥಳಕ್ಕೆ ಅತೀ ಸಮೀಪ ಇರುವ ಇ.ಆರ್.ಎಸ್.ಎಸ್. ವಾಹನವು ಸದ್ರಿ ಸ್ಥಳಕ್ಕೆ ಬಂದು ಅಗತ್ಯ ಸೇವೆಯನ್ನು ಒದಗಿಸಲಿದೆ. ಈ ವಾಹನ ದಿನದ 24 ಘಂಟೆಯೂ ಕಾರ್ಯಾಚರಣೆ ನಡೆಸಲಿದೆ.

ಟೋಲ್ ಪ್ರೀ ನಂಬರ್ 112 ನೇರವಾಗಿ ಬೆಂಗಳೂರು ಕೇಂದ್ರದ ನಿಯಂತ್ರಣದಲ್ಲಿದ್ದು, ಅಕ್ಷಾಂಶ ಹಾಗೂ ರೇಖಾಂಶದ ಆಧಾರದ ಮೇಲೆ, ಕರೆ ಬಂದ ಸ್ಥಳಕ್ಕೆ ಕ್ಷಿಪ್ರವಾಗಿ ಅಗತ್ಯ ಸೇವೆಯನ್ನು ಸಲ್ಲಿಸಲು ಪ್ರತೀ ವಾಹನದಲ್ಲಿ ಓರ್ವ ಎ.ಎಸ್.ಐ. ದರ್ಜೆಯ ಪೊಲೀಸ್ ಅಧಿಕಾರಿಯವರು ಇರುತ್ತಾರೆ. ಈ ವಾಹನಗಳು ಈ ಹಿಂದೆ ಹೆಚ್ಚಿನ ಅಪರಾಧಗಳು ನಡೆದ ಸ್ಥಳಗಳು, ಶಾಲಾ, ಕಾಲೇಜುಗಳ ಸಮೀಪ, ಜನ ದಟ್ಟಣೆ ಪ್ರದೇಶ, ಹೆಚ್ಚು ವಾಹನ ಸಂಚಾರ ಇರುವ ಪ್ರದೇಶಗಳಲ್ಲಿ ಕಾರ್ಯಾಚರಿಸಲಿದೆ.

 

 ಸಾರ್ವಜನಿಕರು, ಅಪಘಾತ ಅಥವಾ ಯಾವುದೇ ತರಹದ ಅಪರಾಧಗಳು ನಡೆದಲ್ಲಿ ಕೂಡಲೇ ಟೋಲ್ ಪ್ರೀ ನಂಬರ್ 112 ಸಂಖ್ಯೆಗೆ ಕರೆ ಮಾಡಲು ತಿಳಿಸಲಾಗಿದೆ.

 
 
 
 
 
 
 
 
 
 
 

Leave a Reply