ಉಡುಪಿ : ಜಾನಪದ ಕನ್ನಡ ರಾಜ್ಯೋತ್ಸವ

ದಿನಾಂಕ: ನ.8 ರಂದು ಕನ್ನಡ ಜಾನಪದ ಪರಿಷತ್ ಬೆಂಗಳೂರು ಹಾಗೂ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ವತಿಯಿಂದ ಜಾನಪದ ಕನ್ನಡ ರಾಜ್ಯೋತ್ಸವ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ.ಎಸ್ ಬಾಲಾಜಿ ಮಾತನಾಡಿ, ಜಾನಪದ ಮೂಕಾದರೆ ಮಾನವ ಜಾನಂಗ ಮೂಕ ಆದಂತೆ ಹಾಗೆ ಜಾನಪದ ಕಲೆ ಸಂಸ್ಕತಿಯನ್ನು ಇಂದಿನ ಯುವ ಜನಾಂಗ ಉಳಿಸಿ ಬೆಳೆಸ ಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ರುದ್ರೆ ಗೌಡ ವಹಿಸಿದರು. ಮುಖ್ಯ ಅತಿಥಿಗಳಾಗಿ ಕನ್ನಡ ಜಾನಪದ ಪರಿಷತ್ ಕರಾವಳಿ ಜಿಲ್ಲೆಗಳ ವಿಭಾಗೀಯ ಸಂಚಾಲಕರಾದ ಡಾ.ಭಾರತಿ ಮರವಂತೆ,ಡಾ.ಕನರಾಡಿ ವಾದಿರಾಜ್ ಭಟ್, ರಾಮನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ಕಾಂತಪ್ಪ, ಕುಂದಾಪುರ ತಾಲೂಕು ಅಧ್ಯಕ್ಷ ಉದಯ ಬಿ, ಹಿರಿಯ ಉಪನ್ಯಾಸಕ ಡಾ. ಯಾದವ ಕರ್ಕೇರಾ ಉಪಸ್ಥಿತರಿದ್ದರು.

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ಡಾ.ಗಣೇಶ್ ಗಂಗೊಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಕಾಪು ತಾಲೂಕು ಅಧ್ಯಕ್ಷರಾದ ಪ್ರಕಾಶ್ ಸುವರ್ಣ ವಂದಿಸಿದರು.ಉಪನ್ಯಾಸಕ ದಯಾನಂದ ಡಿ ಕಾರ್ಯಕ್ರಮ ನಿರ್ವಹಸಿದರು. 

ಕರ್ನಾಟಕ ಜಾನಪದ ಕೋಗಿಲೆ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ.ಗಣೇಶ್ ಗಂಗೊಳ್ಳಿಯನ್ನು ಡಾ.ಎಸ್ ಬಾಲಾಜಿ ಸನ್ಮಾನಿಸಿದರು.

 
 
 
 
 
 
 
 
 
 
 

Leave a Reply