“ಉಡುಪಿ ಕೇದಾರ ಕಜೆ” ಅಕ್ಕಿ ಮಾರಾಟ ಕೇಂದ್ರ ಹುಬ್ಬಳ್ಳಿಯಲ್ಲಿ ತೆರೆಯುವ ಬಗ್ಗೆ ಸಭೆ

ಉಡುಪಿ : ಕೇದಾರೋತ್ಥಾನ ಟ್ರಸ್ಟ್ ಉಡುಪಿ ಮೂಲಕ ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡಿರುವ “ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಹಡಿಲು ಭೂಮಿಯಲ್ಲಿ ಸಾವಯವ ಕೃಷಿ ಮಾಡಿ ಬೆಳೆದಿರುವ ಭತ್ತದಿಂದ ಉತ್ಪಾದಿಸಿದ ಸಂಪೂರ್ಣ ಸಾವಯುವ ಕುಚ್ಚಲಕ್ಕಿ “ಉಡುಪಿ ಕೇದಾರ ಕಜೆ” ಹೆಸರಿನಲ್ಲಿ ಮಾರುಕಟ್ಟೆಗೆ ಬರಲಿದೆ. 

ಈ ಅಕ್ಕಿಯನ್ನು ಉಡುಪಿ – ಮಂಗಳೂರು ಮೂಲದರು ಇರುವ ದೇಶದ ಎಲ್ಲಾ ಭಾಗಗಳಲ್ಲಿ ಮಾರಾಟ ಮಾಡಲು ನಿರ್ಧರಿಸಿರುವಂತೆ ಹುಬ್ಬಳ್ಳಿ ಭಾಗದಲ್ಲಿ “ಉಡುಪಿ ಕೇದಾರ ಕಜೆ” ಅಕ್ಕಿ ಮಾರಾಟ ಕೇಂದ್ರ ತೆರೆಯುವ ಬಗ್ಗೆ ಇಂದು ದಿನಾಂಕ 20-12-2021 ರಂದು ಹುಬ್ಬಳ್ಳಿಯ ಅನಂತ ದಿ ಗ್ರ್ಯಾಂಡ್ ಹೋಟೆಲ್ ನಲ್ಲಿ ಉಡುಪಿ, ಮಂಗಳೂರು ಮೂಲದ ಹುಬ್ಬಳ್ಳಿ ಭಾಗದ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳೊಂದಿಗೆ ಪೂರ್ವ ತಯಾರಿಯ ಬಗ್ಗೆ ಸಭೆ ನಡೆಸಿ ಚರ್ಚಿಸಿದರು.

ಕೇದಾರೋತ್ಥಾನ ಟ್ರಸ್ಟ್ ಉಡುಪಿ ಮೂಲಕ ಕೈಗೊಂಡಿರುವ ಹಡಿಲು ಭೂಮಿ ಕೃಷಿ ಅಂದೋಲನದ ಬಗ್ಗೆ ಸಭೆಯಲ್ಲಿ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಈ ಸಂಪೂರ್ಣ ಸಾವಯವ ಕುಚ್ಚಲಕ್ಕಿಯನ್ನು ಉಡುಪಿ, ದಕ್ಷಿಣ ಕನ್ನಡ ಮೂಲದವರಿಗೆ ಪರಿಚಯಿಸುವ ನಿಟ್ಟಿನಲ್ಲಿ ಹುಬ್ಬಳ್ಳಿ ಭಾಗದಲ್ಲಿ ಇರುವ ಉಡುಪಿ – ದಕ್ಷಿಣ ಕನ್ನಡ ಭಾಗದವರ ಸಮಾವೇಶವನ್ನು ಹುಬ್ಬಳ್ಳಿಯಲ್ಲಿ ನಡೆಸುವ ಬಗ್ಗೆ ಚರ್ಚಿಸಲಾಯಿತು.

ಹುಬ್ಬಳ್ಳಿ-ಧಾರವಾಡ ಬ್ರಾಹ್ಮಣ ಸಮಾಜದ ಅಧ್ಯಕ್ಷರು ಪದಾಧಿಕಾರಿಗಳು, ಹುಬ್ಬಳ್ಳಿ-ಧಾರವಾಡ ಬಂಟರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು, ಹುಬ್ಬಳ್ಳಿ-ಧಾರವಾಡ ಹೋಟೆಲ್ ಮಾಲಕರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು, ಹುಬ್ಬಳ್ಳಿ – ಧಾರವಾಡ ಮೊಗವೀರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು, ಹುಬ್ಬಳ್ಳಿ-ಧಾರವಾಡ ಬಿಲ್ಲವ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply