ಯು.ಪಿ.ಎಂ.ಸಿ ಕಾಲೇಜು ವಾರ್ಷಿಕೋತ್ಸವ- ಸಂಸ್ಥಾಪಕರ ಸಂಸ್ಮರಣೆ

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ 29ನೇ ವಾರ್ಷಿಕೋತ್ಸವ ಹಾಗೂ ಸಂಸ್ಥಾಪಕರ ಸಂಸ್ಮರಣೆ ಕಾರ್ಯಕ್ರಮವು ಅಕ್ಟೋಬರ್ 27ರಂದು ಕಾಲೇಜು ಸಭಾಭವನದಲ್ಲಿ ನಡೆಯಿತು. 

ವೈಕುಂಠ ಬಾಳಿಗ ಕಾನೂನು ಕಾಲೇಜಿನ ಪ್ರಾಚಾರ್ಯರಾದ ಡಾ.ನಿರ್ಮಲಾ ಕುಮಾರಿ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಕಛೇರಿಯ ವಿಶೇಷ ಅಧಿಕಾರಿಗಳಾದ ಡಾ.ಚಂದ್ರು ಹೆಗ್ಡೆ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

2019-20 ರಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಬಿಬಿಎ ಅಂತಿಮ ಪರೀಕ್ಷೆಯಲ್ಲಿ ತೃತೀಯ ರ‍್ಯಾಂಕ್‌ ನ್ನು ಪಡೆದ ಕು. ಶೇಖ್ ಸಫಾ ಅಂಜುಮ್ ಅಬ್ದುಲ್ ರಫೀಕ್, 2020ರಲ್ಲಿ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ್ದ ಕಾಲೇಜಿನ ಅಂತಿಮ ಬಿ.ಕಾಂ ವಿದ್ಯಾರ್ಥಿ ಅಕ್ಷಯ್ ಹೆಗ್ಡೆ, 2019-20 ರ ಅತ್ಯುತ್ತಮ ವಿದ್ಯಾರ್ಥಿ ಪುರಸ್ಕೃತ ಹರ್ಷಾನಂದ ಭಕ್ತ, 2020-21 ರ ಅತ್ಯುತ್ತಮ ವಿದ್ಯಾರ್ಥಿ ಪುರಸ್ಕೃತ ಅಂತಿಮ ಬಿ.ಕಾಂ ವಿದ್ಯಾರ್ಥಿ ವಿನಯ್ ಶಾನುಭೋಗ್ ಇವರನ್ನು ಕಾಲೇಜು ಹಾಗೂ ಹಳೆವಿದ್ಯಾರ್ಥಿ ಸಂಘದ ವತಿಯಿಂದ ಸನ್ಮಾನಿಸಲಾಯಿತು.

2019-20 ಹಾಗೂ 2020-21 ರ ಶೈಕ್ಷಣಿಕ ಹಾಗೂ ಕ್ರೀಡಾ ಸಾಧನೆಗೈದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ಶ್ರೀ ರವಿರಾಜ್ ಹೆಚ್.ಪಿ, ಕಾರ್ಯಾಧ್ಯಕ್ಷರಾದ ಶ್ರೀ ಮನೋಹರ ಶೆಟ್ಟಿ ತೋನ್ಸೆ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಚಾರ್ಯರಾದ ಡಾ.ಮಧುಸೂದನ್ ಭಟ್ ಇವರು ವಾರ್ಷಿಕ ವರದಿ ಯನ್ನು ವಾಚಿಸಿ ಅತಿಥಿಗಳನ್ನು ಸ್ವಾಗತಿಸಿದರು. ಕಾಲೇಜಿನ ಉಪಪ್ರಾಂಶುಪಾಲೆ ಶ್ರೀಮತಿ ಆಶಾ ಹೆಗ್ಡೆ, ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ಗಣೇಶ್ ಕೋಟ್ಯಾನ್, ವಾಣಿಜ್ಯ ಉಪನ್ಯಾಸಕ ಶ್ರೀ ರಾಘವೇಂದ್ರ ಜಿ.ಜಿ ಬಹುಮಾನದ ಪಟ್ಟಿಯನ್ನು ವಾಚಿಸಿದರು.

ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಶ್ರೀ ಚಂದ್ರಶೇಖರ್ ಧನ್ಯವಾದವಿತ್ತರು. ಆಂಗ್ಲ ಭಾಷಾ ಉಪನ್ಯಾಸಕ ಶ್ರೀ ರಾಧಾಕೃಷ್ಣ ರಾವ್ ಕಾರ್ಯಕ್ರಮ ನಿರ್ವಹಿಸಿದರು. 

ಕಾಲೇಜಿನ ವಾಣಿಜ್ಯ ಉಪನ್ಯಾಸಕ ರಾಘವೇಂದ್ರ ಜಿ.ಜಿಯವರ ನಿರ್ವಹಣೆಯಲ್ಲಿ ಸಭಾಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

 
 
 
 
 
 
 
 
 
 
 

Leave a Reply