ನುಲಿಯ ಚಂದಯ್ಯನವರ ವಚನಗಳು ಸರ್ವಕಾಲಕ್ಕೂ ಪ್ರಸ್ತುತ: ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್

ಉಡುಪಿ, ಆಗಸ್ಟ್ 12 (ಕವಾ) : ನುಲಿಯ ಚಂದಯ್ಯನವರ ವಚನಗಳು ಸರ್ವಕಾಲಕ್ಕೂ ಪ್ರಸ್ತುತವಾಗಿದ್ದು, ಅದನ್ನು ಎಲ್ಲರೂ ಪಾಲಿಸಬೇಕು. ನುಲಿಯ ಚಂದಯ್ಯರoತೆ ನಾವು ನಮ್ಮ ಕರ್ತವ್ಯಗಳನ್ನು ಅರಿತು ಶ್ರದ್ಧೆಯಿಂದ ಕೆಲಸ ನಿರ್ವಹಿಸಬೇಕು ಎಂದು ಅಪರ
ಜಿಲ್ಲಾಧಿಕಾರಿ ವೀಣಾ ಬಿ. ಎನ್ ರವರು ಹೇಳಿದರು.

ಅವರು ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ಶ್ರೀ ನುಲಿಯ ಚಂದಯ್ಯ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
12ನೇ ಶತಮಾನ ವಚನ ಸಾಹಿತ್ಯ, ವೈಚಾರಿಕ ಕ್ರಾಂತಿಯ ಮೂಲಕ ಸಮಾಜಕ್ಕೆ ಹೊಸ ತಿರುವು ನೀಡಿದ್ದು, ವಚನಕಾರರಾದ ಬಸವಣ್ಣ, ಚನ್ನ ಬಸವಣ್ಣ, ಅಲ್ಲಮ್ಮಪ್ರಭು, ಅಕ್ಕಮಹಾದೇವಿ, ಇಂತಹ ಪ್ರಸಿದ್ಧ ವಚನಕಾರರು ತಮ್ಮ ವಚನ ಸಾಹಿತ್ಯದ ಮೂಲಕ ಸಾಮಾಜಿಕ ಕ್ರಾಂತಿಯನ್ನುoಟು ಮಾಡಿದ್ದಾರೆ. ಜನ ಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ತ್ರಿಪದಿಗಳ ಮೂಲಕ ವಚನ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಅಂತಹ ಶ್ರೇಷ್ಠ ವಚನಕಾರರಲ್ಲಿ ಶ್ರೀ ನುಲಿಯ ಚಂದಯ್ಯನವರು ಕೂಡ ಕಾಯಕ ನಿಷ್ಠೆಯನ್ನು
ಹೊಂದಿದವರಾಗಿದ್ದು, ಬಸವಣ್ಣನವರ ವಿನೂತನ ವಿಚಾರಧಾರೆಗೆ, ಚಿಂತನೆಗೆ ಆಕರ್ಷಿತರಾಗಿ ಕಲ್ಯಾಣಕ್ಕೆ ಬಂದು ಶ್ರೇಷ್ಠ ಕಾಯಕ ಜೀವಿ
ವಚನಕಾರರೆನಿಸಿಕೊಂಡಿದ್ದಾರೆ ಎಂದರು.

ಅರಣ್ಯದಲ್ಲಿ ಬೆಳೆದ ಹುಲ್ಲಿನಿಂದ ಹಗ್ಗವನ್ನು ಹೊಸೆದು ಮಾರಿ ಬಂದ ಹಣದಿಂದ ಜೀವನ ನಡೆಸುತ್ತಿದ್ದ ನುಲಿಯ ಚಂದಯ್ಯ ನವರ ಅನೇಕ ವಚನಗಳನ್ನು ವಚನ ಸಾಹಿತ್ಯದ ಪಿತಾಮಹರಾದ ಡಾ. ಫ.ಗು ಹಳಕಟ್ಟಿಯವರು ಸಂಗ್ರಹಿಸಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೇಂಪೇಗೌಡ, ಭೂ ದಾಖಲೆಗಳ ಇಲಾಖೆಯ ಉಪ ನಿರ್ದೇಶಕ ರವೀಂದ್ರ, ಪರೀಕ್ಷಾರ್ಥಿ ಅಧಿಕಾರಿ ನೀಲಾಬಾಯಿ ಲಮಾಣಿ, ಉಪ ತಹಶೀಲ್ದಾರ್ ಸಂಪತ್ ಹಾಗೂ ವಿವಿಧ ಇಲಾಖೆಯ ಸಿಬ್ಬಂದಿಗಳು
ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ವಂದಿಸಿದರು.

 
 
 
 
 
 
 
 
 
 
 

Leave a Reply