Janardhan Kodavoor/ Team KaravaliXpress
24.6 C
Udupi
Thursday, September 29, 2022
Sathyanatha Stores Brahmavara

1.20 ಲಕ್ಷ ರು. ವಿದ್ಯಾರ್ಥಿವೇತನ ವಿತರಣೆ

ಬೆಳ್ಮಣ್: ಸ್ವಾತಂತ್ರ್ಯ ದಿನಾಚರಣೆಯ ಅಮೃತಮಹೋತ್ಸವದ ಪ್ರಯುಕ್ತ ‘ವಿದ್ಯಾಮೃತ’ ಕಾರ್ಯಕ್ರಮದ ಮೂಲಕ ವಿಕಾಸ್ ಭಾರತ್ ಟ್ರಸ್ಟ್ ಅರ್ಹ ಪ್ರತಿಭಾವಂತ ಸುಮಾರು 28 ಬಡವಿದ್ಯಾರ್ಥಿಗಳಿಗೆ ದಾನಿಗಳ ನೆರವಿನಿಂದ ಸಂಗ್ರಹಿಸಲಾದ ಒಟ್ಟು 1,20,000 ರು. ಮೊತ್ತದ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಟ್ರಸ್ಟ್ ನ ಗೌರವಾಧ್ಯಕ್ಷ ಸುಹಾಸ್ ಹೆಗ್ಡೆ ಆಗಮಿಸಿದ್ದರು. ಟ್ರಸ್ಟ್ ನ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ, ಗೌರವ ಸಲಹೆಗಾರರಾದ ಶರತ್ ಶೆಟ್ಟಿ ಮುಂಡ್ಕೂರು, ಕಾರ್ಯದರ್ಶಿ ವೀರೇಂದ್ರ ಆರ್.ಕೆ., ಅಕ್ಷಿತಾ ಹೆಗ್ಡೆ ಉಪಸ್ಥಿತರಿದ್ದರು. ಕಾನೂನು ಸಲಹೆಗಾರ ಸರ್ವಜ್ಞ ತಂತ್ರಿ ಕಾರ್ಯಕ್ರಮ ನಿರೂಪಿಸಿದರು. ಟ್ರಸ್ಟ್ ಸದಸ್ಯರಾದ ಯಶವಂತ್, ಮನೋಜ್ ಭಟ್.,ಶಿನೋದ್, ಪ್ರತ್ವಿನ್, ಸುಭಾಷ್ ಕುಮಾರ್, ಪುಷ್ಪಲತಾ, ಸುವಿತಾ ಶೆಟ್ಟಿ ಹಾಜರಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!