ವಿಶ್ವ ಮಾನವ ಕಳ್ಳ ಸಾಗಣಿಕೆ ತಡೆ ದಿನಾಚರಣೆ

ಚೈಲ್ಡ್ ಲೈನ್-1098 ಉಡುಪಿ ವತಿಯಿಂದ ವಿಶ್ವ ಮಾನವ ಕಳ್ಳ ಸಾಗಣಿಕೆ ತಡೆ ದಿನಾಚರಣೆಯ ಪ್ರಯುಕ್ತ ಸರಕಾರಿ ಪ್ರೌಢಶಾಲೆ ಇಂದಿರಾ ನಗರ ಉಡುಪಿ ಇಲ್ಲಿನ ವಿದ್ಯಾರ್ಥಿಗಳಿಗೆ ಮಕ್ಕಳ ಕಳ್ಳ ಸಾಗಾಣಿಕೆಯ ಕುರಿತು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಚೈಲ್ಡ್ ಲೈನ್-1098 ಉಡುಪಿಯ ನಿರ್ದೇಶಕರಾದ ರಾಮಚಂದ್ರ ಉಪಾಧ್ಯಾಯರು ಪ್ರಾಸ್ತಾವಿಕ ನುಡಿ ಗಳನ್ನಾಡಿದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ರೈಲ್ವೆ ರಕ್ಷಣಾ ಪಡೆ ಇನ್ಸಪೆಕ್ಟರ್ ಆಗಿರುವ ಶ್ರೀ ಪಿ.ವಿ ಮದುಸೂದನ್ ಇವರು ವಿದ್ಯಾರ್ಥಿಗಳಿಗೆ ಮಕ್ಕಳ ಕಳ್ಳ ಸಾಗಾಣಿಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವನ್ನುಮೂಡಿಸಿದರು. ಹಾಗೂ ಮಕ್ಕಳು ಕಡ್ಡಾಯವಾಗಿ ಶಿಕ್ಷಣವನ್ನು ಪಡೆಯಬೇಕು. ತಮ್ಮನ್ನು ತಾವು ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗುವಂತಹ ವಿಷಯಗಳಲ್ಲಿ ತೊಡಗಿಸಿಕೊಳ್ಳುವಂತೆ ತಿಳಿ ಹೇಳಿದರು. 
ಅಲ್ಲದೇ ಮಕ್ಕಳಿಗೆ ಯಾವುದೇ ರೀತಿಯಾದ ಸಮಸ್ಯೆಯಾದಲ್ಲಿ ಚೈಲ್ಡ್ ಲೈನ್ 1098ಅಥವಾ ಪೋಲಿಸರಿಗೆ ಕರೆ ಮಾಡಿ ಸಹಾಯವನ್ನು ಪಡೆಯಲು ತಿಳಿಸಿದರು. ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸರಕಾರಿ ಪ್ರೌಢಶಾಲೆ ಇಂದಿರಾ ನಗರ ಇಲ್ಲಿನ ಮುಖ್ಯೋಪಾಧ್ಯಾಯರು ಮಕ್ಕಳು ಅಪರಿಚಿತರ ಬಗ್ಗೆ ಸದಾ ಎಚ್ಚರದಿಂದ ಇರಬೇಕು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ರೈಲ್ವೆ ರಕ್ಷಣಾ ಪಡೆ ಉಡುಪಿ ಸಿಬ್ಬಂದಿ ಸಜೀರ್, ಸರಕಾರಿ ಪ್ರೌಢಶಾಲೆ ಇಂದಿರಾ ನಗರ ಉಡುಪಿ ಇಲ್ಲಿನ ಶಿಕ್ಷಕ ವೃಂದದವರು,  ಚೈಲ್ಡ್ ಲೈನ್   -1098 ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಚೈಲ್ಡ್ ಲೈನ್-1098 ಕೇಂದ್ರ ಸ೦ಯೋಜಕಿ ಕು. ಜ್ಯೋತಿ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

Leave a Reply