ಮುಲಾಯಂ ಸಿಂಗ್ ಯಾದವ್ ಇನ್ನಿಲ್ಲ

ಲಕ್ನೊ: ಹಿರಿಯ ರಾಜಕಾರಣಿ, ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಅವರಿಗೆ 82 ವರ್ಷ ವಯಸ್ಸಾಗಿತ್ತು. ಈ ಮೂಲಕ ದೇಶದ ರಾಜಕೀಯದಲ್ಲಿ ಬಹುದೊಡ್ಡ ಕೊಂಡಿಯೊಂದು ಕಳಚಿದಂತಾಗಿದೆ. ಅವರು ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು.

 
 
 
 
 
 
 
 
 
 
 

Leave a Reply