ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಯಕ್ಷಗಾನ ತರಗತಿ ಉದ್ಘಾಟನೆ.

ಉಡಪಿ ವಿಧಾನ ಸಭಾ ವ್ಯಾಪ್ತಿಯಲ್ಲಿ ಯಕ್ಷಶಿಕ್ಷಣ ಟ್ರಸ್ಟ್ ಕಳೆದ 16 ವರ್ಷಗಳಿಂದ ನಡೆಸಿಕೊಂಡು ಬಂದಿರುವ ಪ್ರೌಢಶಾಲಾ ವಿದ್ಯಾರ್ಥಿಗಳ ಯಕ್ಷಗಾನ ತರಬೇತಿ ತರಗತಿಗಳು ಈ ವರ್ಷ ಸುಮಾರು ಐವತ್ತು ಪ್ರೌಢಶಾಲೆಗಳಲ್ಲಿ ನಡೆಯಲಿವೆ. ಉಡುಪಿ ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಪೌಢಶಾಲಾ ವಿಭಾಗದ ಯಕ್ಷಗಾನ ತರಗತಿಗಳನ್ನು ಉಡುಪಿ ಶಾಸಕ ಹಾಗೂ ಯಕ್ಷಶಿಕ್ಷಣ ಟ್ರಸ್ಟ್ ನ ಅಧ್ಯಕ್ಷ ಕೆ. ರಘುಪತಿ ಭಟ್ ಇಂದು (25-06-2022) ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

ಈಗಾಗಲೇ ನೂರಕ್ಕೂ ಅಧಿಕ ವಿದ್ಯಾರ್ಥಿನಿಯರು ಹೆಸರು ನೊಂದಾಯಿಸಿರುವುದರಿಂದ ಎರಡು ವಿಭಾಗ ಮಾಡುವುದಾಗಿ ಸೂಚಿಸಿದರು. ಟ್ರಸ್ಟ್ ನ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯಕ್ಷಗುರು ಕು. ಕೀರ್ತನಾ ಉದ್ಯಾವರ ಯಕ್ಷಗಾನ ಕಲಿಕೆಯಿಂದ ತನಗಾದ ಪ್ರಯೋಜನವನ್ನು ಹಂಚಿಕೊಂಡರು. ಟ್ರಸ್ಟಿ ನಾರಾಯಣ ಎಮ್. ಹೆಗಡೆ, ಶಾಲಾಭಿವೃದ್ಧಿ ಮಂಡಳಿಯ ಉಪಾಧ್ಯಕ್ಷೆ ತಾರಾದೇವಿ, ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮೀ ಸ್ವಾಗತಿಸಿ, ಶಿಕ್ಷಕಿ ಉಷಾ ಕುಮಾರಿ ವಂದನಾರ್ಪಣೆಗೈದರು.

 
 
 
 
 
 
 
 
 
 
 

Leave a Reply