ವೈದ್ಯಕೀಯ ಶಿಕ್ಷಣದಲ್ಲಿ ಹಿಂದುಳಿದ ವರ್ಗ ಮತ್ತು ಆರ್ಥಿಕ ದುರ್ಬಲ ವರ್ಗಕ್ಕೆ ಮೀಸಲಾತಿ: ಯಶ್‌ಪಾಲ್ ಅಭಿನಂದನೆ.

ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳಿಗೆ 72% ಮತ್ತು ಆರ್ಥಿಕ ದುರ್ಬಲ ವರ್ಗಕ್ಕೆ 10% ಮೀಸಲಾತಿಯ ಐತಿಹಾಸಿಕ ನಿರ್ಧಾರ ಕೈಗೊಂಡ ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್‌ಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ಈಗಾಗಲೇ ಮಹತ್ವದ ಬದಲಾವಣೆ ತಂದಿರುವ ಕೇಂದ್ರ ಸರಕಾರ ಹಿಂದುಳಿದ ವರ್ಗಗಳ ಮತ್ತು ಆರ್ಥಿಕ ದುರ್ಬಲ ವರ್ಗಕ್ಕೆ ಮೀಸಲಾತಿ ನೀಡುವ ಮೂಲಕ ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳ ಪಾಲಿಗೆ ಆಶಾಕಿರಣವಾಗಿದೆ.

ಕೇಂದ್ರ ಸರಕಾರದ ಈ ಐತಿಹಾಸಿಕ ನಿರ್ಧಾರದಿಂದ ಪದವಿಪೂರ್ವ ಮತ್ತು ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳಿಗೆ ಈ ಮೀಸಲಾತಿ ಅನ್ವಯವಾಗಲಿದ್ದು, ಹಿಂದುಳಿದ ವರ್ಗಗಳ ಸುಮಾರು 4000 ವಿದ್ಯಾರ್ಥಿಗಳಿಗೆ ಹಾಗೂ ಆರ್ಥಿಕ ದುರ್ಬಲ ವರ್ಗದ ಸುಮಾರು 1550 ವಿದ್ಯಾರ್ಥಿಗಳಿಗೆ ನೆರವಾಗಲಿದೆ.

ಈ ಮಹತ್ವದ ನಿರ್ಧಾರ ಕೈಗೊಂಡ ಪ್ರಧಾನಿ ಶ್ರೀ ನರೇಂದ್ರ ಮೋದಿ, ಗೃಹ ಸಚಿವರಾದ ಶ್ರೀ ಅಮಿತ್ ಶಾ, ಕೇಂದ್ರ ಶಿಕ್ಷಣ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್, ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ ಬಿಜೆಪಿ ರಾಷ್ಟ್ರೀಯ  ಅಧ್ಯಕ್ಷರಾದ ಶ್ರೀ ಜೆ ಪಿ ನಡ್ಡಾ, ಕೇಂದ್ರ ಸಚಿವರಾದ ಕುಮಾರಿ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲು ಹಾಗೂ ಕೇಂದ್ರ ಸರಕಾರದ ಸಚಿವ ಸಂಪುಟದ ಸರ್ವ ಸದಸ್ಯರಿಗೆ ಅಭಿನಂದನೆ ಸಲ್ಲಿಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 

Leave a Reply