ಹಿಂದುಳಿದ ವರ್ಗಗಳ ಸಮುದಾಯದ ಸಚಿವರಿಗೆ ಸನ್ಮಾನ : ಯಶ್ ಪಾಲ್ ಸುವರ್ಣ 

ಬೆಂಗಳೂರು: ನಗರದ ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಸೆ. 22ರಂದು ಸಂಜೆ 6 ಗಂಟೆಗೆ ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಘಟಕದ ವತಿಯಿಂದ, ರಾಜ್ಯದ ಬಿಜೆಪಿ ಸರಕಾರದಲ್ಲಿ ಒಬಿಸಿ ಸಮುದಾಯದಿಂದ ಸಚಿವರಾದ ಜನಪ್ರತಿನಿಧಿಗಳನ್ನು ಸನ್ಮಾನಿಸಲಾಗು ವುದು ಎಂದು ಬಿಜೆಪಿ ಒ.ಬಿ.ಸಿ. ಮೋರ್ಚಾ  ರಾಷ್ಟ್ರೀಯ  ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಯಶ್‌ಪಾಲ್ ಎ. ಸುವರ್ಣ ಮತ್ತು ಒ.ಬಿ.ಸಿ. ಮೋರ್ಚಾ ರಾಜ್ಯ ಅಧ್ಯಕ್ಷರಾದ ಶ್ರೀ ನೆ.ಲ. ನರೇಂದ್ರಬಾಬು ಅವರು ತಿಳಿಸಿದ್ದಾರೆ.

ರಾಜ್ಯದ ಸಚಿವರಾದ ಶ್ರೀ ಕೆ.ಎಸ್.ಈಶ್ವರಪ್ಪ, ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಶ್ರೀ ಸುನೀಲ್ ಕುಮಾರ್, ಶ್ರೀ ಎಂ.ಟಿ.ಬಿ.ನಾಗರಾಜ್, ಶ್ರೀ ಭೈರತಿ ಬಸವರಾಜ್, ಶ್ರೀ ಮುನಿರತ್ನ ಮತ್ತು ಶ್ರೀ ಆನಂದ್ ಸಿಂಗ್ ಅವರಿಗೆ ಗೌರವಾರ್ಪಣೆ ನಡೆಯಲಿದೆ. ಅಲ್ಲದೆ, ಒಬಿಸಿ ಸಮುದಾಯದ ಶಾಸಕ ರಿಗೆ ಗೌರವಾರ್ಪಣೆಯೂ ನೆರವೇರಲಿದೆ ಎಂದು ಅವರು ತಿಳಿಸಿದ್ದಾರೆ.

ಸಂಸದರಾದ ಶ್ರೀ ಪಿ.ಸಿ. ಮೋಹನ್ ಮತ್ತು ಶ್ರೀ ನಾರಾಯಣ್ ಅವರನ್ನೂ ಗೌರವಿಸಲಾಗುವುದು. ಕಾರ್ಯಕರ್ತರ ಜೊತೆ ಭೇಟಿಗೆ ಇದೊಂದು ಅವಕಾಶ ಎಂದು ತಿಳಿಸಿದ್ದು, ನೀಟ್ ಪರೀಕ್ಷೆಯಲ್ಲಿ ಒಬಿಸಿ ಸಮುದಾಯಕ್ಕೆ ಶೇ 27ರಷ್ಟು ಅವಕಾಶ ನೀಡಿದ ಜನಪರ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರ ಕ್ರಮವನ್ನು ಸ್ವಾಗತಿಸಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸಚಿವ ಸಂಪುಟಕ್ಕೆ ಒಬಿಸಿ ಸಮುದಾಯದ 27 ಜನರನ್ನು ಸೇರ್ಪಡೆಗೊಳಿಸಿದ್ದನ್ನು ಮೋರ್ಚಾ ಸ್ವಾಗತಿಸುತ್ತದೆ. ಇಂಥ ಕ್ರಮಕ್ಕಾಗಿ ಪ್ರಧಾನಿ ಶ್ರೀ ಮೋದಿ ಅವರಿಗೆ ಕೃತಜ್ಞತೆ ಸಲ್ಲಿ ಸುತ್ತದೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಮುಖ್ಯಮಂತ್ರಿಗಳು ಏಳು ಜನ ಹಿಂದುಳಿದ ಸಮಾಜದ ಸಚಿªರನ್ನು ಸೇರ್ಪಡೆ ಮಾಡಿಕೊಂಡಿದ್ದಾರೆ. 
 
ಅದಕ್ಕಾಗಿ ಮೋರ್ಚಾ ವತಿಯಿಂದ ಮುಖ್ಯಮ೦ತ್ರಿಗಳಿಗೂ ತುಂಬು ಹೃದಯದ ಧನ್ಯವಾದಗಳನ್ನು ಸಮರ್ಪಿಸುವುದಾಗಿ ತಿಳಿಸಿದ್ದಾರೆ. ಸೆ.೨೨ರಂದು ನಡೆಯುವ ಈ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ, ಬಿಜೆಪಿ ಒ.ಬಿ.ಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಡಾ.ಲಕ್ಷ್ಮಣ್, ಬಿಜೆಪಿ ರಾಜ್ಯಾಧ್ಯಕ್ಷ  ಮತ್ತು ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿ.ಟಿ ರವಿ, ಮಾಜಿ ಮುಖ್ಯಮಂತ್ರಿಗಳು ಮತ್ತು ಸಂಸದ ಶ್ರೀ ಡಿ. ವಿ. ಸದಾನಂದ ಗೌಡ, ಸಚಿವರು ಮತ್ತು ಸ್ಥಳೀಯ ಶಾಸಕರಾದ ಡಾ. ಸಿ.ಎನ್ ಅಶ್ವತ್ಥನಾರಾಯಣ್, ಕೇಂದ್ರ  ಲೋಕಸಭಾ ಸದಸ್ಯರಾದ ಶ್ರೀ ಪಿ.ಸಿ ಮೋಹನ್ ಅವರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಸಂಸದರು, ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಚುನಾವಣಾ ಪ್ರತಿನಿಧಿ ಗಳು ಮತ್ತು ಒಬಿಸಿ ಸಮುದಾಯಗಳ ಮುಖಂಡರು, ಒ.ಬಿ.ಸಿ ಮೋರ್ಚಾ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply