ನಗರ ವಾಸಿಗಳು ಸ್ವಚ್ಛ ಗಾಳಿ ಸೇವಿಸುವಲ್ಲಿ ಪೌರ ಕಾರ್ಮಿಕರ ಶ್ರಮ ಶ್ಲಾಘನೀಯ : ಯಶ್‌ಪಾಲ್ ಸುವರ್ಣ

ಕಾಪು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಘೋಷಣೆಯಂತೆ ಸೇವಾ ಹೀ ಸಂಘಟನ್ ಧ್ಯೇಯ ವಾಕ್ಯದಡಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಎ. ಸುವರ್ಣ ಅವರು ವೈಯಕ್ತಿಕವಾಗಿ ಕೊರೊನಾ ವಾರಿಯರ್‌ಗಳಾಗಿ ದುಡಿಯುತ್ತಿರುವ ಕಾಪು ಪುರಸಭೆ 40 ಮಂದಿ ಪೌರ ಕಾರ್ಮಿಕರಿಗೆ ಸುಮಾರು 60 ಸಾವಿರ ರೂಪಾಯಿ ವೆಚ್ಚದಲ್ಲಿ ಪಡಿತರ ಕಿಟ್‌ಗಳನ್ನು ವಿತರಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಕೊರೊನಾ ಸಂಕಷ್ಟದ ನಡುವೆಯೂ ಪೌರ ಕಾರ್ಮಿಕರ ಸೇವೆ ಅನನ್ಯವಾಗಿದೆ. ಕಾಪು ಪಟ್ಟಣವು ಸ್ವಚ್ಛವಾಗಿ, ಪುರಸಭೆ ವ್ಯಾಪ್ತಿಯ ನಾಗರಿಕರು ಸ್ವಚ್ಛ ಗಾಳಿಯನ್ನು ಸೇವಿಸುವಲ್ಲಿ ಪೌರ ಕಾರ್ಮಿಕರ ಶ್ರಮ ಶ್ಲಾಘನೀಯವಾಗಿದೆ. ಅವರ ಸೇವೆಯನ್ನು ಗುರುತಿಸಿ, ಕುಟುಂಬವು ಲಾಕ್‌ಡೌನ್ ಸಂದರ್ಭದಲ್ಲಿ ಎದುರಿಸುತ್ತಿರುವ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸಲು ಪೂರಕವಾಗಿ ಪಡಿತರ ಕಿಟ್‌ಗಳನ್ನು ಒದಗಿಸಲಾಗುತ್ತಿದೆ ಎಂದರು.
ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಸುಬ್ರಾಯ ಕಾಮತ್, ಕಾಪು ಪುರಸಭೆಯ ಅಧಿಕಾರಿ ಬಾಲೇಶ್, ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಪುರಸಭೆಯ ನಿಕಟಪೂರ್ವ ಅಧ್ಯಕ್ಷ ಅನಿಲ್ ಕುಮಾರ್, ಸದಸ್ಯರಾದ ವಿಜಯ ಕರ್ಕೇರ, ಸುರೇಶ್ ದೇವಾಡಿಗ, ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುರ್ಣ,
ಬಿಜೆಪಿ ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್, ನಗರ ಬಿಜೆಪಿ ಅಧ್ಯಕ್ಷ ಸಂದೀಪ್ ಶೆಟ್ಟಿ, ಬಿಜೆಪಿ ಮುಖಂಡರಾದ ಸುಮಾ ಯು. ಶೆಟ್ಟಿ,. ಮಾಲಿನಿ ಶೆಟ್ಟಿ, ಗಣೇಶ್ ಕುಮಾರ್ ಮಟ್ಟು, ರತ್ನಾಕರ ಶೆಟ್ಟಿ, ಪ್ರವೀಣ ಕುಮಾರ್, ಯತೀಶ್ ಕೋಟ್ಯಾನ್ ಮಟ್ಟು ಮೊದಲಾದವರು ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply