ವಿಠಲ ಶೇರಿಗಾರ್ ರವರಿಗೆ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ವತಿಯಿಂದ ಅಭಿನಂದನೆ 

ಸಹಕಾರಿ ಸಂಘಗಳ ಲೆಕ್ಕಪರಿಶೋಧನ ಇಲಾಖೆಯ ಉಪನಿರ್ದೇಶಕರಾಗಿ ವಯೋ ನಿವೃತ್ತಿ ಹೊಂದಿದ ಶ್ರೀ ವಿಠಲ ಶೇರಿಗಾರ್ ರವರಿಗೆ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿ ಶುಭ ಹಾರೈಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ ವಹಿಸಿದ್ದರು.

ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ಶ್ರೀ ರವಿರಾಜ್ ಹೆಗ್ಡೆ, ಸಹಕಾರಿ ಇಲಾಖೆಯ ಸಹಾಯಕ ಉಪನಿಬಂಧಕರಾದ ಶ್ರೀ ಅರುಣ್ ಕುಮಾರ್ , ಸಹಕಾರಿ ಸಂಘಗಳ ಲೆಕ್ಕ ಪರಿಶೋಧನ ಇಲಾಖೆಯ ನೂತನ ಉಪನಿರ್ದೇಶಕರಾದ ಶ್ರೀ ಗಣೇಶ್ ಮಯ್ಯ ಹಾಗೂ ಸಹಕಾರಿ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು

 
 
 
 
 
 
 
 
 
 
 

Leave a Reply