ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಪುಷ್ಪಾನಂದ ಫೌಂಡೇಶನ್ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಣೆ

ಕಾಪು ಪುರಸಭೆ ವ್ಯಾಪ್ತಿಯಲ್ಲಿ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ 105 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುಷ್ಪಾನಂದ ಫೌಂಡೇಶನ್ ವತಿಯಿಂದ ಕಾಪು ಲಕ್ಷ್ಮೀ ಜನಾರ್ಧನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ವಿತರಿಸಲಾಯಿತು.

ಪುಷ್ಪಾನಂದ ಫೌಂಡೇಶನ್ ಪ್ರವರ್ತಕರಾದ ಶ್ರೀ ಯಶ್ ಪಾಲ್ ಸುವರ್ಣ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಶ್ರೀ ಉದಯ ಕುಮಾರ್ ಶೆಟ್ಟಿ, ಜ್ಯೋತಿಷ್ಯ ವಿದ್ವಾನ್ ಪ್ರಕಾಶ್ ಅಮ್ಮಣ್ಣಾಯ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಕಾಪು ಶ್ರೀ ಹಳೇ ಮಾರಿಗುಡಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಪ್ರಸಾದ್ ಜಿ. ಶೆಣೈ, ಕಾಪು‌ ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಆಡಳಿತ‌ ಮಂಡಳಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಕಾಪು‌ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಆಡಳಿತ‌ ಮಂಡಳಿ ಮಾಜಿ‌ ಅಧ್ಯಕ್ಷ ಮೋಹನ್ ಬಂಗೇರ, ಕಾಪು ಬಿಲ್ಲವರ‌ ಸಹಾಯಕ ಸಂಘದ ಗೌರವಾಧ್ಯಕ್ಷ ಪ್ರಭಾಕರ‌ ಪೂಜಾರಿ, ಕಾಪು‌ ದಂಡತೀರ್ಥ ವಿದ್ಯಾ ಸಂಸ್ಥೆಯ ಉಪನ್ಯಾಸಕ ನೀಲಾನಂದ‌ ನಾಯ್ಕ್, ಮಹಾದೇವಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಜ್ಯೋತಿ ಯು., ಕಾಪು ಪುರಸಭಾ ವ್ಯಾಪ್ತಿ‌ ಬಿಜೆಪಿ ಅಧ್ಯಕ್ಷ ಸಂದೀಪ್‌ ಶೆಟ್ಟಿ, ಸಾಮಾಜಿಕ ಕಾರ್ಯಕರ್ತೆ ನೀತಾ‌ ಪ್ರಭು ಮೊದಲಾದವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply