ಪುಷ್ಪಾನಂದ ಫೌಂಡೇಶನ್ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಣೆ

ಕಾಪು ವಿಧಾನ ಸಭಾ ಕ್ಷೇತ್ರದ ಕೋಟೆ, ಕಟಪಾಡಿ ಮತ್ತು ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ 125 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುಷ್ಪಾನಂದ ಫೌಂಡೇಶನ್ ವತಿಯಿಂದ ಜೇಸಿ ಭವನ ಪಳ್ಳಿಗುಡ್ಡೆ ಕಟಪಾಡಿ ಯಲ್ಲಿ ನಡೆದ ಸಮಾರಂಭದಲ್ಲಿ ವಿತರಿಸಲಾಯಿತು.

ಪುಷ್ಪಾನಂದ ಫೌಂಡೇಶನ್ ಪ್ರವರ್ತಕರಾದ ಶ್ರೀ ಯಶ್ ಪಾಲ್ ಸುವರ್ಣ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಇನ್ನಂಜೆ ಗ್ರಾ.ಪಂ ಮಾಜಿ ಅಧ್ಯಕ್ಷ ಸುಧಾಕರ್ ಡಿ. ಅಮೀನ್ ಪಾಂಗಾಳಗುಡ್ಡೆ, ಕಟಪಾಡಿ ವಿಜಯಾ ಇಂಡಸ್ಟ್ರೀಸ್ ಆಡಳಿತ ನಿರ್ದೇಶಕರಾದ ಸತ್ಯೇಂದ್ರ ಪೈ, ಕೋಟೆ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ನ್ಯಾಯವಾದಿ ಗಣೇಶ್ ಕುಮಾರ್ ಮಟ್ಟು, ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚದ ಅಧ್ಯಕ್ಷೆ ವೀಣಾ ಶೆಟ್ಟಿ, ತಾ.ಪಂ ಮಾಜಿ ಸದಸ್ಯ ರಾಜೇಶ್ ಅಂಬಾಡಿ, ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಜಿಲ್ಲಾ ಸಂಚಾಲಕ ವಿಜಯ ಕುಮಾರ್ ಉದ್ಯಾವರ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋಪಾಲ್‌ಕೃಷ್ಣ ರಾವ್ ಮಟ್ಟು, ಕಾಪು ಕ್ಷೇತ್ರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ, ಕಾಪು ಕ್ಷೇತ್ರ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಸುಮಾ ಉದಯ ಶೆಟ್ಟಿ, ಉದ್ಯಾವರ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿ ಸಾಲ್ಯಾನ್, ಉದ್ಯಾವರ ಗ್ರಾ.ಪಂ ಸದಸ್ಯ ಜಿತೇಂದ್ರ ಶೆಟ್ಟಿ ಉದ್ಯಾವರ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply