ಕೇಂದ್ರ ಸರಕಾರದಿಂದ ನಾಡ ದೋಣಿ ಮೀನುಗಾರಿಕೆಗೆ ಹೆಚ್ಚುವರಿ 30 ಲಕ್ಷ ಲೀಟರ್ ಸೀಮಎಣ್ಣೆ ಬಿಡುಗಡೆ : ಯಶ್ ಪಾಲ್ ಸುವರ್ಣ ಅಭಿನಂದನೆ

ರಾಜ್ಯದ ಕರಾವಳಿ ಭಾಗದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರು ಮೀನುಗಾರಿಕೆ ನಡೆಸಲು ಸಕಾಲದಲ್ಲಿ ಸೀಮೆ ಎಣ್ಣೆ ಹಂಚಿಕೆಯಾಗದೇ ಎದುರಿಸುತ್ತಿದ್ದ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ 2022-23 ನೇ ಸಾಲಿನ 30 ಲಕ್ಷ ಲೀಟರ್ ಹೆಚ್ಚುವರಿ ಸೀಮೆ ಎಣ್ಣೆಯನ್ನು ಬಿಡುಗಡೆಗೊಳಿಸಿದ ಕೇಂದ್ರ ಸರಕಾರಕ್ಕೆ ಸಮಸ್ತ ಮೀನುಗಾರರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ ಯಶ್ ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

ಜುಲೈ ತಿಂಗಳಿನಲ್ಲಿ ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ವತಿಯಿಂದ ದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶೋಭಾ ಕರಂದ್ಲಾಜೆ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ರವರ ನೇತೃತ್ವದಲ್ಲಿ ಕೇಂದ್ರ ಪೆಟ್ರೋಲಿಯಂ ಸಚಿವರಾದ ಶ್ರೀ ಹರ್ ದೀಪ್ ಸಿಂಗ್ ಪುರಿ, ಕೇಂದ್ರ ಮೀನುಗಾರಿಕೆ ಮತ್ತು ಪಶು ಸಂಗೋಪನೆ ಇಲಾಖೆ ರಾಜ್ಯ ಸಚಿವರಾದ ಶ್ರೀ ಎಲ್ ಮುರುಗನ್ ರವಾರನ್ನು ಭೇಟಿಯಾಗಿ ನಾಡದೋಣಿ ಮೀನುಗಾರಿಕೆಗೆ ಸಮರ್ಪಕ ಸೀಮೆ ಎಣ್ಣೆ ಪೂರೈಕೆಗೆ ಸಲ್ಲಿಸಿದ ಮನವಿಗೆ ಸ್ಪಂದಿಸಿದ ಕೇಂದ್ರ ಸರಕಾರ ಹೆಚ್ಚುವರಿ ಸೀಮೆ ಎಣ್ಣೆ ಬಿಡುಗಡೆ ಮಾಡುವ ಮೂಲಕ ಬಡ ಮೀನುಗಾರರ ಬಗ್ಗೆ ತಮ್ಮ ಕಾಳಜಿ ಮೆರೆದಿದೆ.

ನಾಡದೋಣಿ ಮೀನುಗಾರರ ಬಹುದಿನದ ಬೇಡಿಕೆಯಾದ ಸೀಮೆ ಎಣ್ಣೆ ಪೂರೈಕೆ ಸಮಸ್ಯೆಯ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ ಹೆಚ್ಚುವರಿ ಸೀಮೆ ಎಣ್ಣೆ ಬಿಡುಗಡೆ ಗೊಳಿಸುವಲ್ಲಿ ಸಹಕರಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ಪೆಟ್ರೋಲಿಯಂ ಸಚಿವರಾದ ಶ್ರೀ ಹರ್ ದೀಪ್ ಸಿಂಗ್ ಪುರಿ, ಮೀನುಗಾರಿಕೆ ಸಚಿವರಾದ ಪರ್ಶೋತ್ತಮ್ ರೂಪಾಲ, ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್, ಶಿವಮೊಗ್ಗ ಸಂಸದರಾದ ಶ್ರೀ ಬಿ ವೈ ರಾಘವೇಂದ್ರ, ಮೀನುಗಾರಿಕೆ ಸಚಿವರಾದ ಶ್ರೀ ಅಂಗಾರ, ಕರಾವಳಿ ಜಿಲ್ಲೆಯ ಎಲ್ಲಾ ಶಾಸಕರಿಗೆ ಸಮಸ್ತ ಮೀನುಗಾರರ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply