ಮತಾಂಧ ಶಕ್ತಿಗಳಿಗೆ ಫಲಿತಾಂಶದ ಮೂಲಕ ದಿಟ್ಟ ಉತ್ತರ ನೀಡಿದ ವಿದ್ಯಾರ್ಥಿಗಳಿಗೆ ಅಭಿನಂದನೆ : ಯಶ್ ಪಾಲ್ ಸುವರ್ಣ

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಅಗ್ರಸ್ಥಾನವನ್ನು ಪಡೆಯುವ ಮೂಲಕ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಹಿಜಾಬ್ ವಿವಾದವನ್ನು ಸೃಷ್ಟಿಸಿ ಬಡ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸಲು ಹುನ್ನಾರ ನಡಿಸಿದ ಮತಾಂಧ ಶಕ್ತಿಗಳಿಗೆ ದಿಟ್ಟ ಉತ್ತರ ನೀಡಿರುವ ವಿದ್ಯಾರ್ಥಿ ವೃಂದಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

 ಹೈ ಕೋರ್ಟ್ ಆದೇಶವನ್ನು ಧಿಕ್ಕರಿಸಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕೋರಿ ಪರೀಕ್ಷಾ ಕೇಂದ್ರದಲ್ಲಿ ಗೊಂದಲ ವಾತಾವರಣ ನಿರ್ಮಿಸಿ, ತಾವು ಪರೀಕ್ಷೆ ಬರೆಯದೇ ಉಳಿದ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ ನಡೆಸಿದರೂ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿಗಳು ಧರ್ಮಕ್ಕಿಂತ ಶಿಕ್ಷಣವೇ ಮೇಲು ಎಂಬುದನ್ನು ಈ ಫಲಿತಾಂಶದ ಮೂಲಕ ಸಾಬೀತುಪಡಿಸಿದ್ದಾರೆ.

ಹಿಜಾಬ್ ವಿವಾದದ ಮೂಲಕ ಕರಾವಳಿ ಜಿಲ್ಲೆಯ ಶಿಕ್ಷಣದ ಗುಣಮಟ್ಟದ ಬಗ್ಗೆ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಕುಂದಿಸಲು ಮುಂದಾದ ಹಲವು ಮಂದಿ ರಾಷ್ಟ್ರವಿರೋಧಿಗಳ ಪ್ರಯತ್ನ ವಿಫಲವಾಗಿದೆ.

 ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಹಲವು ಗೊಂದಲ, ಅನಪೇಕ್ಷಿತ ಘಟನೆಗಳ ನಡುವೆಯೂ ವಿದ್ಯಾರ್ಥಿಗಳಿಗೆ ಮಾನಸಿಕ ಸ್ಥೈರ್ಯ ತುಂಬಿ ಉತ್ತಮ ಫಲಿತಾಂಶದ ಮೂಲಕ ಜಿಲ್ಲೆಗೆ ಕೀರ್ತಿ ತಂದ ಕಾಲೇಜಿನ ಶಿಕ್ಷಕ ವೃಂದ ಹಾಗೂ ಕಾಲೇಜು ಅಭಿವೃದ್ದಿ ಸಮಿತಿಯ ಪದಾಧಿಕಾರಿಗಳು ಹಾಗೂ ಶಿಕ್ಷಣ ವ್ಯವಸ್ಥೆಯ ಬಗ್ಗೆ ಭರವಸೆ ಇಟ್ಟು ಉತ್ತಮ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದ ವಿದ್ಯಾರ್ಥಿಗಳ ಪೋಷಕರಿಗೂ ವಂದನೆಗಳನ್ನು ಸಲ್ಲಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply