ಸಾಣೂರು ಗ್ರಾಮ ಪಂಚಾಯತ್ ನ ಸುವರ್ಣ ಗ್ರಾಮೋಧಯ ಸೌಧದಲ್ಲಿ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಮಾನಸಿಕ ದೈಹಿಕ ಶಾರೀರಿಕ ಭಾವನಾತ್ಮಕ ಬೆಸುಗೆಗೆ ಯೋಗ ಪೂರಕವಾಗುತದೆ ಎಂದು ರಾಜ್ಯ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಮಾಜಿ ಅಧ್ಯಕ್ಷರಾದ ಶ್ರೀ ಪ್ರವೀಣ್ ಶೆಟ್ಟಿ ಅಭಿಪ್ರಾಯ ಪಟ್ಟರು. ಅವರು ಸಾಣೂರು ಗ್ರಾಮ ಪಂಚಾಯತ್ ನ ಸುವರ್ಣ ಗ್ರಾಮೋಧಯ ಸೌಧದಲ್ಲಿ ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಸಂಘಟನೆ ಉಡುಪಿ, ಗ್ರಾಮ ಪಂಚಾಯತ್ ಸಾಣೂರು, ಹಾಗೂ ರಾಜ್ಯ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು ಸುಮಾರು 5000 ಸಾವಿರ ವರ್ಷಗಳ ಇತಿಹಾಸ ಇರುವ ಯೋಗದಿಂದ ಮನುಷ್ಯನಿಗೆ ಬಾಹ್ಯ ಸೌಂದರ್ಯ ಎಷ್ಟು ಮುಖ್ಯವೊ, ಆಂತರಿಕ ಸೌಂದರ್ಯವು ಅಷ್ಟೇ ಮುಖ್ಯವಾಗಿರುತ್ತದೆ. ಇವೆರಡನ್ನು ಚೆನ್ನಾಗಿ ಇಟ್ಟುಕೊಳ್ಳಲು ಯೋಗವು ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪ್ರತಿ ನಿತ್ಯವು ಮನುಷ್ಯ ಯೋಗ ಮಾಡುವುದರಿಂದ ಉತ್ತಮವಾದ ಆರೋಗ್ಯಕರ ಜೀವನವನ್ನು ನಡೆಸಬಹುದಾಗಿದೆ ಎಂದರು.

ಸಾಣೂರು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಶ್ರೀ ಕರುಣಾಕರ್ ಎಸ್. ಕೋಟ್ಯಾನ್ ಯೋಗದ ಗುರಿಯು ಕೇವಲ ದೇಹವನ್ನು ಸರಿಪಡಿಸುವುದು ಮಾತ್ರವಲ್ಲ. ಮನಸ್ಸು, ದೇಹ ಮತ್ತು ಆತ್ಮ ಸೇರಿದ ಎಲ್ಲ ಮೂರು ಅಂಶಗಳನ್ನು ಶುದ್ದೀಕರಿಸಲು ನೆರವಾಗುತ್ತದೆ. ಇದು ನಾವು ಮತ್ತು ಪ್ರಕೃತಿ ಮಾತೆಯ ಜೊತೆ ಸಂರ್ಪಕವನ್ನು ಕಲ್ಪಿಸುತ್ತದೆ. ಇದು ನಮ್ಮನ್ನು ನಮ್ಮ ನೈಜತೆಯ ಹತ್ತಿರಕ್ಕೆ ಕೊಂಡೊಯ್ಯುತ್ತದೆ. ಯೋಗವು ವ್ಯಾಯಮ ಮಾತ್ರವಲ್ಲದೇ ಮನುಷ್ಯ,ವಿಶ್ವ ಹಾಗೂ ಪ್ರಕೃತಿಯ ಜೊತೆಗೆ ಏಕತೆಯ ಅರ್ಥವನ್ನು ಕಂಡುಹಿಡಿಯಲು ನೆರವಾಗುತ್ತದೆ. ನಮ್ಮ ಜೀವನಶೈಲಿ ಹಾಗೂ ಪ್ರಜ್ಞೆ ರಚಿಸುವ ಮೂಲಕ ಹವಮಾನ ಬದಲಾವಣೆ ನಿಭಾಯಿಸಲು ಮತ್ತು ಯೋಗಕ್ಷೇಮವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಯೋಗವು ಮನಸ್ಸು ಮತ್ತು ದೇಹ, ಚಿಂತನೆ ಮತ್ತು ಕ್ರಿಯೆ, ಸಂಯಮ ಮತ್ತು ಸಾರ್ಥಕತೆಯನ್ನು ಒಗ್ಗೂಡಿಸುತ್ತದೆ. ಹಾಗೇಯೆ ಪ್ರಕೃತಿ ಮತ್ತು ಮನುಷ್ಯನ ನಡೆವೆ ಸಾಮರಸ್ಯವನ್ನುಂಟು ಮಾಡುತ್ತದೆ. ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸಲು ಸಹಾಯ ಮಾಡುತ್ತದೆ ಎಂದರು ಸಾಣೂರು ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಮಧು ಎಂ. ಸಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಶ್ರೀಮತಿ ಅರುಣಿ ಯುವಕ ಮಂಡಲದ ಮಾಜಿ ಅಧ್ಯಕ್ಷರುಗಳಾದ ಶ್ರೀ ಜಗದೀಶ್ ಕುಮಾರ್, ಶ್ರೀ ಪ್ರಕಾಶ್ ಮಡಿವಾಳ ಉಪಸ್ಥಿತರಿದ್ದರು.

ಯೋಗ ಗುರುಗಳಾದ ಶ್ರೀ ಬಾಲಕೃಷ್ಣ ರೆ.ಖ್ಯ ಯೋಗಾಸನದ ಮಾಹಿತಿ ನೀಡಿ ವಿವಿಧ ಆಸನಗಳ ಪ್ರದರ್ಶನ ನಡೆಸಿಕೊಟ್ಟರು ಯುವಕ ಮಂಡಲದ ಅಧ್ಯಕ್ಷರು ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಆದ ಶ್ರೀ ಪ್ರಸಾದ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು ಯುವಕ ಮಂಡಲದ ಕಾರ್ಯದರ್ಶಿ ಶ್ರೀ ಮೋಹನ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

 
 
 
 
 
 
 
 
 
 
 

Leave a Reply