Janardhan Kodavoor/ Team KaravaliXpress
26.6 C
Udupi
Monday, June 27, 2022
Sathyanatha Stores Brahmavara

ತಿರುಮಲದಲ್ಲಿ ಕರ್ನಾಟಕ ಭವನ

ಆಂಧ್ರ ಪ್ರದೇಶದ ತಿರುಪತಿ ದೇವಸ್ಥಾನಕ್ಕೆ ಆಗಮಿಸುವ ಕರ್ನಾಟಕದ ಭಕ್ತರಿಗೆ ತಿರುಮಲದಲ್ಲಿ ನೂತನ ಕರ್ನಾಟಕ ಭವನ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ ಗುರುವಾರ ನೆರವೇರಿತು.

ಈ ಸಂದರ್ಭದಲ್ಲಿ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಹಾಗೂ ಕರ್ನಾಟಕ ಸರ್ಕಾರದ ಮುಜ ರಾಯಿ ಸಚಿವ ರಾದ ಕೋಟ ಶ್ರೀನಿವಾಸ ಪೂಜಾರಿ ಯವರು ಉಪಸ್ಥಿತರಿದ್ದರು.

ಕರ್ನಾಟಕದ ಬಾಲಾಜಿ ಭಕ್ತರ ಬಹುದಿನದ ಕನಸು ನನಸಾಗುತ್ತಿದೆ. ಕೋಟ ಶ್ರೀನಿವಾಸ ಪೂಜಾರಿಯವರ ವಿಶೇಷ ಆಸಕ್ತಿಯ ಈ ಕರ್ನಾಟಕ ಭವನ ಅತೀ ಶೀಘ್ರಗತಿಯಲ್ಲಿ ಪೂರ್ಣಗೊಂಡು ಲೋಕಾರ್ಪಣೆ ಗೊಳ್ಳಲಿದೆ ಎಂದು ಸಚಿವರು ಹೇಳಿದರು

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!